ADVERTISEMENT

ಲಸಿಕೆ ಪಡೆದು ಆರೋಗ್ಯ ಕಾಪಾಡಿಕೊಳ್ಳಿ: ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಸಲಹೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2021, 5:49 IST
Last Updated 5 ಜೂನ್ 2021, 5:49 IST
ವಡಗೇರಾ ಪಟ್ಟಣದ ಮಾರಿಕಾಂಬೆ ದೇವಸ್ಥಾನದ ಆವರಣದಲ್ಲಿಕೋವಿಡ್ ಲಸಿಕೆ ಅಭಿಯಾನಕ್ಕೆ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಚಾಲನೆ ನೀಡಿ ಮಾತನಾಡಿದರು
ವಡಗೇರಾ ಪಟ್ಟಣದ ಮಾರಿಕಾಂಬೆ ದೇವಸ್ಥಾನದ ಆವರಣದಲ್ಲಿಕೋವಿಡ್ ಲಸಿಕೆ ಅಭಿಯಾನಕ್ಕೆ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಚಾಲನೆ ನೀಡಿ ಮಾತನಾಡಿದರು   

ವಡಗೇರಾ: ಪ್ರತಿಯೊಬ್ಬರು ಕೋವಿಡ್ ಲಸಿಕೆ ಹಾಕಿಸಿಕೊಳ್ಳುವ ಮೂಲಕ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಹೇಳಿದರು.

ಪಟ್ಟಣದ ಮಾರಿಕಾಂಬೆ ದೇವಸ್ಥಾನದ ಆವರಣದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಹಮ್ಮಿಕೊಂಡಿದ್ದ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸೋಂಕು ನಿರ್ಮೂಲನೆಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಗಲಿರುಗಳು ಶ್ರಮಿಸುತ್ತಿವೆ. ಇಂಥ ಸಂದರ್ಭದಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಎಲ್ಲರೂ ಚಾಚೂತಪ್ಪದೆ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎಂದು ತಿಳಿಸಿದರು.

ADVERTISEMENT

ಲಸಿಕೆ ಹಾಕಿಸಿಕೊಂಡರೆ ಅಡ್ಡ ಪರಿಣಾಮಗಳು ಉಂಟಾಗುತ್ತವೆ ಎಂಬ ವದಂತಿಗಳನ್ನು ಯಾರೂ ನಂಬಬಾರದು. ದೇಶದಲ್ಲಿ 22 ಕೋಟಿ ಜನರಿಗೆ ಲಸಿಕೆ ಹಾಕಲಾಗಿದ್ದು, ಯಾರಿಗೂ ತೊಂದರೆಯಾಗಿಲ್ಲ. ಧೈರ್ಯದಿಂದ ಲಸಿಕೆ ಪಡೆದು, ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಸುರೇಶ ಅಂಕಲಗಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಚಂಡ್ರಿಕಿ, ಶ್ರೀನಿವಾರೆಡ್ಡಿ ಚೆನ್ನೂರು, ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಸಿದ್ದಣ್ಣಗೌಡ ಕಾಡಂನೋರ್, ಪಿಎಸ್‍ಐ ಸಿದ್ದರಾಯ ಬಳೂರ್ಗಿ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಧಿಕಾರಿ ಜಗನ್ನಾಥರೆಡ್ಡಿ, ಗೌರಿಶಂಕರ ಹಿರೇಮಠ, ಡಾ. ಗಾಳೆಪ್ಪ ಪೂಜಾರಿ, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ ಕಾಡಂನೋರ್, ಡಾ. ಮರಿಯಪ್ಪ ನಾಟೇಕಾರ, ಬಸವರಾಜ ನಾಟೇಕಾರ, ಶಿವಕುಮಾರ ಗೋನಾಲ, ಸುದರ್ಶನ ನೀಲಹಳ್ಳಿ, ಮೌನೇಶ, ಮಲ್ಲು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.