ADVERTISEMENT

ಯಾದಗಿರಿ ಶಾಸಕ ಮುದ್ನಾಳಗೆ ಸಚಿವ ಸ್ಥಾನ ನೀಡಿ: ಕವಿತಾ ವಿನಾಯಕ ಪಾಟೀಲ

ಬಿಜೆಪಿ ನಗರ ಮಹಿಳಾ ಘಟಕದಿಂದ ಆಗ್ರಹ, ಅಭಿವೃದ್ಧಿಗೆ ಪೂರಕ

​ಪ್ರಜಾವಾಣಿ ವಾರ್ತೆ
Published 31 ಜುಲೈ 2021, 3:14 IST
Last Updated 31 ಜುಲೈ 2021, 3:14 IST
ಕವಿತಾ ವಿನಾಯಕ ಪಾಟೀಲ
ಕವಿತಾ ವಿನಾಯಕ ಪಾಟೀಲ   

ಯಾದಗಿರಿ: ‘ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು’ ಎಂದು ಬಿಜೆಪಿ ನಗರ ಮಹಿಳಾ ಘಟಕದ ಅಧ್ಯಕ್ಷೆ ಕವಿತಾ ವಿನಾಯಕ ಪಾಟೀಲ ಆಗ್ರಹಿಸಿದರು.

‘ಶಾಸಕರು ಅಖಿಲ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷರಾಗಿದ್ದಾರೆ. ಅಭಿವೃದ್ಧಿಗೆ ಪೂರಕ ಕೆಲಸ ಮಾಡುತ್ತಿದ್ದಾರೆ. ವೈದ್ಯಕೀಯ ಕಾಲೇಜು ಮಂಜೂರಿಗೆ ಶ್ರಮಿಸಿದ್ದಾರೆ. ಕೊರೊನಾ ಸಂದರ್ಭದಲ್ಲಿ ಅನ್ನದಾನ, ಕಿಟ್ ವಿತರಣೆ ಮಾಡಿದ್ದಾರೆ. ದೀನ ದಲಿತರ ಉದ್ಧಾರಕ್ಕಾಗಿ ಶ್ರಮಿಸಿದ್ದಾರೆ. ಹೀಗಾಗಿ ಇವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಬೇಕು’ ಎಂದು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಮುದ್ನಾಳ ಅವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯಾಗುತ್ತದೆ. ಹೀಗಾಗಿ ‌ಪ್ರಧಾನಿ ಮೋದಿ, ಗೃಹ‌ಸಚಿವ ಅಮಿತಾ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ಮುಖಂಡರಲ್ಲಿ ಮನವಿ ಮಾಡುತ್ತೇನೆ’ ಎಂದರು.

ADVERTISEMENT

ಈ ವೇಳೆ ಬಿಜೆಪಿ ಮುಖಂಡರಾದ ಲಕ್ಷ್ಮೀ ಕುಂಸಿ, ಮಹಾದೇವಮ್ಮ ವನಮಾಲ, ಭೀಮಾಬಾಯಿ, ಸಿದ್ದಮ್ಮ ಯಲಗೊಂಡ, ರಮೇಶ ದೊಡಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.