ADVERTISEMENT

12ನೇ ಶತಮಾನ ವಚನಗಳ ಸುವರ್ಣ ಯುಗ

ಜಿಲ್ಲಾ, ತಾಲ್ಲೂಕು ಶರಣ ಸಾಹಿತ್ಯ ವತಿಯಿಂದ ಸಂಸ್ಥಾಪನಾ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2021, 14:39 IST
Last Updated 29 ಆಗಸ್ಟ್ 2021, 14:39 IST
ಯಾದಗಿರಿ ಜಿಲ್ಲಾ ಮತ್ತು ತಾಲ್ಲೂಕು ಶರಣ ಪರಿಷತ್‌ ವತಿಯಿಂದ ಶರಣ ಸಾಹಿತ್ಯ ಸಂಸ್ಥಾಪನಾ ದಿನಾಚರಣೆಯಲ್ಲಿ ಸಿ.ಎಂ.ಪಟ್ಟೇದಾರ ಮಾತನಾಡಿದರು
ಯಾದಗಿರಿ ಜಿಲ್ಲಾ ಮತ್ತು ತಾಲ್ಲೂಕು ಶರಣ ಪರಿಷತ್‌ ವತಿಯಿಂದ ಶರಣ ಸಾಹಿತ್ಯ ಸಂಸ್ಥಾಪನಾ ದಿನಾಚರಣೆಯಲ್ಲಿ ಸಿ.ಎಂ.ಪಟ್ಟೇದಾರ ಮಾತನಾಡಿದರು   

ಯಾದಗಿರಿ: 12ನೇ ಶತಮಾನ ವಚನಗಳ ಸುವರ್ಣ ಯುಗ. ಶರಣರು ತಮ್ಮ ಇಚ್ಛ ದೈವದ ನಾಮಾಂತಿಕದಲ್ಲಿ ಶ್ರೀಮಂತಗೊಳಿಸಿದರು ಎಂದು ಕೋಲಿ ಸಮಾಜದ ಮುಖಂಡ ಸಿ.ಎಂ.ಪಟ್ಟೇದಾರ ಅಭಿಪ್ರಾಯಿಸಿದರು.

ಜಿಲ್ಲಾ ಮತ್ತು ತಾಲ್ಲೂಕು ಶರಣ ಪರಿಷತ್‌ ವತಿಯಿಂದ ನಗರದ ಕನ್ನಡ ಸಾಹಿತ್ಯ ಪರಿಷತ್‌ ಸಭಾಂಗಣದಲ್ಲಿ ಜಗದ್ಗುರು ಲಿಂ. ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಜನ್ಮದಿನದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಶರಣ ಸಾಹಿತ್ಯ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಸಾಮಾನ್ಯರಿಗೆ ತಿಳಿಯುವಂತೆ ಶುದ್ಧ ಕನ್ನಡದಲ್ಲಿ ವಚನಗಳನ್ನು ಬರೆದು ಜನತೆಗೆ ನೀಡಿದ್ದಾರೆ. ಶರಣ ಸಾಹಿತ್ಯ ಪರಿಷತ್‌ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಶರಣರ ಆಶಯಗಳ ಈಡೇರಿಸಬೇಕು. ಈಗ ನಾವು ಆತ್ಮಾವಲೋಕನ ಮಾಡಿಕೊಳ್ಳುವ ಮೂಲಕ ವಚನ ಸಾಹಿತ್ಯವನ್ನು ಎತ್ತಿಹಿಡಿಯಬೇಕು ಎಂದು ಹೇಳಿದರು.

ADVERTISEMENT

ತಾಲ್ಲೂಕು ಅಧ್ಯಕ್ಷ ಗುರುಪ್ಪಚಾರ್ಯ ಬಾಡಿಯಾಳ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಕುರಿತು ಸಾಹಿತಿ ಶ್ರೀಶೈಲ ಪೂಜಾರಿ ವಿಶೇಷ ಉಪನ್ಯಾಸ ನೀಡಿದರು.

ಶರಣ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ಅಧ್ಯಕ್ಷತೆ ವಹಿಸಿದ್ದರು.

ವಿಶ್ವಕರ್ಮ ಏಕದಂಡಗಿ ಮಠದ ಕುಮಾರಸ್ವಾಮಿಯವರು ಸಾನ್ನಿಧ್ಯ ವಹಿಸಿದ್ದರು. ಶರಣ ಸಾಹಿತ್ಯ ‍ಪರಿಷತ್‌ ಪ್ರಧಾನ ಕಾರ್ಯದರ್ಶಿ ಡಾ.ಭೀಮರಾಯ ಲಿಂಗೇರಿ ನಿರೂಪಿಸಿದರು. ಕೋಶಾಧ್ಯಕ್ಷ ಎಸ್‌.ಎಸ್‌.ನಾಯಕ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಬಸವರಾಜ ಮೋಟ್ನಳ್ಳಿ ವಂದಿಸಿದರು. ಪಂಡಿತ ಪುಟ್ಟರಾಜ ಗವಾಯಿ ಸಂಗೀತ ಪಾಠಶಾಲೆಯಿಂದ ವಚನ ಗಾಯನ ನಡೆಯಿತು.

ಸಾಹಿತಿ ಅಯ್ಯಣ್ಣ ಹುಂಡೇಕಾರ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಎಸ್‌.ಎನ್‌.ಮಣ್ಣೂರ ಸೇರಿದಂತೆ ಶರಣರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.