ಯಾದಗಿರಿ: ನಗರ ಸೇರಿ ಜಿಲ್ಲೆಯಾದ್ಯಂತ ಸೋಮವಾರ ಜಿಟಿ ಜಿಟಿ ಮಳೆ ಸುರಿಯಿತು. ಗುರುಮಠಕಲ್, ಶಹಾಪುರ, ಸುರಪುರ, ವಡಗೇರಾ, ಯರಗೋಳ, ಕೆಂಭಾವಿಯಲ್ಲಿ ಉತ್ತಮ ಮಳೆಯಾಗಿದೆ.
ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆಗೆ ಉತ್ತಮ ಮಳೆ ಸುರಿಯಿತು. ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಹರ್ಷ ಉಂಟು ಮಾಡುತ್ತಿದೆ. ಕೃಷಿ ಚಟುವಟಿಕೆ ಕೈಗೊಳ್ಳಲು ಪೂರಕವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.