ADVERTISEMENT

‘ಸರ್ಕಾರಿ ಕಚೇರಿ, ಕಟ್ಟಡಗಳನ್ನು ಕಡ್ಡಾಯವಾಗಿ ಸ್ವಚ್ಚವಾಗಿಡಿ’

ತಾ ಅಭಿಯಾನಕ್ಕೆ ಚಾಲನೆ; ತಾಪಂ ಇಒ ಮಲ್ಲಿಕಾರ್ಜುನ ಸಂಗ್ವಾರ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2025, 7:55 IST
Last Updated 30 ಡಿಸೆಂಬರ್ 2025, 7:55 IST
ವಡಗೇರಾ ಪಟ್ಟಣದ ಅಂನವಾಡಿ ಕೇಂದ್ರದ ಆವರಣವನ್ನು ಸ್ವಚ್ಚ ಮಾಡುವುದರ ಮೂಲಕ ಸ್ವಚ್ಚತಾ ಅಭಿಯಾನಕ್ಕೆ ತಾಪಂ ಇಒ ಮಲ್ಲಿಕಾರ್ಜುನ ಸಂಗ್ವಾರ ಚಾಲನೆ ನೀಡಿದರು
ವಡಗೇರಾ ಪಟ್ಟಣದ ಅಂನವಾಡಿ ಕೇಂದ್ರದ ಆವರಣವನ್ನು ಸ್ವಚ್ಚ ಮಾಡುವುದರ ಮೂಲಕ ಸ್ವಚ್ಚತಾ ಅಭಿಯಾನಕ್ಕೆ ತಾಪಂ ಇಒ ಮಲ್ಲಿಕಾರ್ಜುನ ಸಂಗ್ವಾರ ಚಾಲನೆ ನೀಡಿದರು   

ವಡಗೇರಾ: ‘ತಾಲ್ಲೂಕಿನಲ್ಲಿ ಇರುವ ಪ್ರತಿಯೊಂದು ಸರ್ಕಾರಿ ಕಚೇರಿಗಳನ್ನು ಹಾಗೂ ಕಟ್ಟಡಗಳನ್ನು ಕಡ್ಡಾಯವಾಗಿ ಸ್ವಚ್ಚವಾಗಿ ಇಟ್ಟುಕೊಳ್ಳವುದರ ಮೂಲಕ ಬೇರೆಯವರಿಗೆ ಮಾದರಿಯಾಗಬೇಕು’ ಎಂದು ತಾಪಂ ಇಒ ಮಲ್ಲಿಕಾರ್ಜುನ ಸಂಗ್ವಾರ ಹೇಳಿದರು.

ಪಟ್ಟಣದ ಅಂನವಾಡಿ ಕೇಂದ್ರದ ಆವರಣವನ್ನು ಸ್ವಚ್ಚ ಮಾಡುವುದರ ಮೂಲಕ ಸ್ವಚ್ಚತಾ ಅಭಿಯಾನಕ್ಕೆ ಚಾಲನೆಯನ್ನು ನೀಡಿ ಅವರು ಮಾತನಾಡಿದರು.

‘ತಾಲ್ಲೂಕಿನ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಇಂದು ಸ್ವಚ್ಚತಾ ಅಭಿಯಾನ ನಡೆಯುತಿದ್ದು ವೇಳಾಪಟ್ಟಿ ಅನುಸಾರ ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯಿತಿ ಕಚೇರಿಗಳು, ಅಂಗನವಾಡಿ ಕೇಂದ್ರ, ಆರೋಗ್ಯ ಕೇಂದ್ರಗಳಲ್ಲಿ ಮತ್ತು ಶಾಲಾ ಆವರಣದಲ್ಲಿ ಸ್ವಚ್ಚತಾ ಅಭಿಯಾನ ಆರಂಭಿಸಲಾಗಿದೆ’ ಎಂದು ತಿಳಿಸಿದರು.

ADVERTISEMENT

‘ಮಂಗಳವಾರ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರಿನ ಘಟಕಗಳನ್ನು ಸ್ವಚ್ಚಗೊಳಿಸುವುದು ನಂತರ ಬುಧುವಾರ ಸಾರ್ವಜನಿಕರ ಹಾಗೂ ಗ್ರಾಮಸ್ಥರ ಸಹಾಭಾಗಿತ್ವದಲ್ಲಿ ಸ್ವಚ್ಚತಾ ಉತ್ಸವ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ’ ಎಂದರು.

‘ಪಿಡಿಒ ಹಾಗೂ ಸಿಬ್ಬಂದಿ ನಾಲ್ಕೂ ದಿನ ನಡೆಯುವ ಈ ಉತ್ಸವದಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು’ ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.