ADVERTISEMENT

ಗುರುಮಠಕಲ್: ಹೃದಯಾಘಾತದಿಂದ ಗ್ರಾಮ ಪಂಚಾಯಿತಿ ಸದಸ್ಯ ಸಾವು

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 13:29 IST
Last Updated 7 ಏಪ್ರಿಲ್ 2021, 13:29 IST
   

ಗುರುಮಠಕಲ್ (ಯಾದಗಿರಿ ಜಿಲ್ಲೆ): ಕ್ರಿಕೆಟ್ ಆಡಲು ತೆರಳಿದ್ದ ಗ್ರಾಮ ಪಂಚಾಯಿತಿ ಸದಸ್ಯ ಹೃದಯಾಘಾತದಿಂದ ಮೃತಪಟ್ಟ ಘಟನೆ ಬುಧವಾರ ಜರುಗಿದೆ.

ತಾಲ್ಲೂಕಿನ ಕೇಶ್ವಾರ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಉಮೇಶ ಗಾಳ (30) ಅವರು ಬುಧವಾರ ಬೆಳಿಗ್ಗೆ ಕ್ರಿಕೆಟ್ ಟೂರ್ನಮೆಂಟ್‌ ಗಾಗಿ ಸೇಡಂ ತಾಲ್ಲೂಕಿನ ಕಾನಾಗಡ್ಡ ಗ್ರಾಮಕ್ಕೆ ತೆರಳಿದ್ದರು. ಅಲ್ಲಿ ಹೃದಯಾಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆ ವೇಳೆಗೆ ಉಮೇಶ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತಪಡಿಸಿದರು ಎಂದು ಕೇಶ್ವಾರ ಗ್ರಾಮಸ್ಥರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT