ADVERTISEMENT

‘ಸ್ಥಳದಲ್ಲೇ ಸಮಸ್ಯೆಗಳು ಇತ್ಯರ್ಥ’

ಗೋನಾಲ: ಅಧಿಕಾರ ಗ್ರಾಮ ವಾಸ್ತವ್ಯ

​ಪ್ರಜಾವಾಣಿ ವಾರ್ತೆ
Published 19 ಜೂನ್ 2022, 4:28 IST
Last Updated 19 ಜೂನ್ 2022, 4:28 IST
ವಡಗೇರಾ ತಾಲ್ಲೂಕಿನ ಗೋನಾಲ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ರೈತರಿಗೆ ಕೃಷಿ ಇಲಾಖೆ ವತಿಯಿಂದ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಯಿತು
ವಡಗೇರಾ ತಾಲ್ಲೂಕಿನ ಗೋನಾಲ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ರೈತರಿಗೆ ಕೃಷಿ ಇಲಾಖೆ ವತಿಯಿಂದ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಯಿತು   

ವಡಗೇರಾ: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಮಹತ್ವಪೂರ್ಣ ಕಾರ್ಯಕ್ರಮ. ಇದರ ಮೂಲಕ ಹಲವಾರು ಸಮಸ್ಯೆಗಳು ಇತ್ಯರ್ಥವಾಗಲಿವೆ’ ಎಂದು ತಹಶಿಲ್ದಾರ್ ಸುರೇಶ ಅಂಕಲಗಿ ಹೇಳಿದರು.

ತಾಲ್ಲೂಕಿನ ಗೋನಾಲ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

65 ಅರ್ಜಿಗಳು ಸ್ವೀಕೃತಿಯಾಗಿದ್ದವು. 29 ಅರ್ಜಿಗಳನ್ನು ಇತ್ಯರ್ಥ ಪಡಿಸಲಾಗಿದೆ.

ADVERTISEMENT

ಇನ್ನೂ ಬಾಕಿ 36 ಅರ್ಜಿಗಳು ಬಾಕಿ ಇವೆ ಅವುಗಳನ್ನು ಸಹ ಶೀಘ್ರವಾಗಿ ಪರಿಹರಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ಅವರು
ನೀಡಿದರು.

ಕೃಷಿ ಇಲಾಖೆಯಿಂದ 15 ರೈತರಿಗೆ ಬಿತ್ತನೆ ಬೀಜಗಳನ್ನು ಮತ್ತು ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣೆ ಆಯುಷ್ಮಾನ್ ಭಾರತ ಯೋಜನೆಯ ಆರೋಗ್ಯ ಕಾರ್ಡ ವಿತರಣೆ ಮಾಡಲಾಯಿತು.

ಗ್ರಾಮ ಪಂಚಾಯತಿ ಅಧ್ಯಕ್ಷ ಸಂದೀಪರಡ್ಡಿ, ಗ್ರೇಡ್ 2 ತಹಶಿಲ್ದಾರ್ ಪ್ರಕಾಶ ಹೊಸಮನಿ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.