ಶಿಕ್ಷಕ
– ಗೆಟ್ಟಿ ಚಿತ್ರ
ಯಾದಗಿರಿ: ಶಾಲಾ ಮಕ್ಕಳೊಂದಿಗೆ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದಾಗ ನಿಯಮ ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿದ ಆರೋಪದಡಿ ಸುರಪುರ ತಾಲ್ಲೂಕಿನ ಕೆಂಭಾವಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಅತಿಥಿ ಶಿಕ್ಷಕ ಒಬ್ಬರನ್ನು ಬಿಡುಗಡೆ ಮಾಡಿ, ಮುಖ್ಯಶಿಕ್ಷಕರಿಗೆ ನೋಟಿಸ್ ಕೊಡಲಾಗಿದೆ.
ಗುರುರಾಜ ಅತಿಥಿ ಶಿಕ್ಷಕ ಹುದ್ದೆಯಿಂದ ಬಿಡುಗಡೆಯಾದವರು. ಮುಖ್ಯಶಿಕ್ಷಕ ಮಲ್ಲಿಕಾರ್ಜುನ ಬಿ. ಪಾಟೀಲ ಅವರಿಗೆ ನೋಟಿಸ್ ಕೊಡಲಾಗಿದೆ ಎಂದು ಡಿಡಿಪಿಐ ಆದೇಶದಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿನಿಯರ ಪ್ರವಾಸಕ್ಕೆ ತೆರಳುವ ಮುಂಚೆ ಶಾಲಾ ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಶಿಕ್ಷಕಿಯರು ಹಾಜರಿ ಇರಬೇಕು. ಆದರೆ, 93 ವಿದ್ಯಾರ್ಥಿನಿಯರು ಪ್ರವಾಸಕ್ಕೆ ತೆರಳಿದ್ದು, ಕೇವಲ ಒಬ್ಬರು ಮಹಿಳಾ ಶಿಕ್ಷಕರನ್ನು ಕರೆದುಕೊಂಡು ಹೋಗಿ ಶಿಕ್ಷಣ ಇಲಾಖೆಯ ನಿಯಮ ಉಲ್ಲಂಘಿಸಲಾಗಿದೆ. ಮುಖ್ಯಶಿಕ್ಷಕರು ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಕರ್ತವ್ಯ ಲೋಪ ಎಸಗಿದ್ದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.