ಯಾದಗಿರಿ: ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಅವರಿಗೆ ಕೋವಿಡ್-19 ದೃಢಪಟ್ಟಿದೆ.
ಈ ಕುರಿತು ಶಾಸಕರ ಪುತ್ರ ಶರಣಗೌಡ ಕಂದಕೂರ ತಮ್ಮ ಫೇಸ್ ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.
'ನಮ್ಮ ತಂದೆ ಶಾಸಕ ನಾಗನಗೌಡ ಕಂದಕೂರ ಮತ್ತು ಸಹೋದರ ಮಲ್ಲಿಕಾರ್ಜುನರೆಡ್ಡಿ ಅವರಿಗೆ ಪರೀಕ್ಷೆ ಮಾಡಿಸಿದಾಗ ಕೋವಿಡ್ ದೃಢಪಟ್ಟಿದೆ. ರೋಗ ಲಕ್ಷಣ ಇಲ್ಲದಿದ್ದರೂ ಆರೋಗ್ಯದ ಹಿತದೃಷ್ಟಿಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ದರಿಂದ ಶಾಸಕರ ಸಂಪರ್ಕಕ್ಕೆ ಬಂದ ಎಲ್ಲರೂ ಹೋಂ ಕ್ವಾರಂಟೈನ್‌ಗೆ ಒಳಗಾಗಬೇಕು ಮತ್ತು ಪರೀಕ್ಷೆ ಮಾಡಿಸಿಕೊಳ್ಳಬೇಕು' ಎಂದು ಕೋರಿದ್ದಾರೆ.
ಶೀಘ್ರದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ಗುಣಮುಖರಾಗಿ ಜನಸೇವೆಗೆ ಬರಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.