ಗುರುಮಠಕಲ್: ಕೇಂದ್ರದ ಕೃಷಿ ಕಾಯ್ದೆಗಳ ತಿದ್ದುಪಡಿಯನ್ನು ಕೈಬಿಡಲು ಆಗ್ರಹಿಸಿ ದೇಶದಾದ್ಯಂತ ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‌ಗೆ ಪಟ್ಟಣದಲ್ಲಿ ಯಾವುದೇಬೆಂಬಲ ಸಿಗದೆ ದಿನನಿತ್ಯದಂತೆ ವ್ಯಾಪಾರ ವಾಹಿವಾಟು ಮುಂದುವರೆದದ್ದು ಕಂಡುಬಂದಿತು.
ಮಂಗಳವಾರ ಬೆಳಗ್ಗೆಯಿಂದಲೂ ಅಂಗಡಿ ಮುಂಗಟ್ಟುಗಳು, ಸಾರಿಗೆ ವ್ಯವಸ್ಥೆ, ವ್ಯಾಪಾರ ವಾಹಿವಾಟು ಎಂದಿನಂತೆ ಇತ್ತು.
ಬಂದ್ ಬೆಂಬಲಿಸಿ ಬಿಎಸ್‌ಪಿ ಕಾರ್ಯಕರ್ತರು ತಹಶೀಲ್ದಾರ್ ಸಂಗಮೇಶ ಜಿಡಗೆ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿ, ಕೇಂದ್ರದ ರೈತ ವಿರೋಧಿ ನೀತಿಗಳನ್ನು ಕೂಡಲೇಕೈಬಿಡುವಂತೆ ಆಗ್ರಹಿಸಿ ಮನವಿ ಪತ್ರವನ್ನು ಅಧಿಕಾರಿಗೆ ಸಲ್ಲಿಸುವ ಮೂಲಕ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನಾ ನಿರತರನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಮಾಡುತ್ತಿರುವ ಕೆಲಸಗಳು ತುಂಬಾ ಅಮಾನವೀಯವಾಗಿವೆ. ಕೂಡಲೇ ಆ ತಿದ್ದುಪಡಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.
ಭೀಮಶಪ್ಪ ಗಾಡದನ, ಅಶೋಕ ಗಿರಿಗಿರಿ, ಭೀಮಪ್ಪ ಮಾಧ್ವಾರ, ಮಹಾದೇವಪ್ಪ ಚಪೆಟ್ಲಾ, ಪ್ರಕಾಶ ಬಂಟು, ಭೀಮು, ಧನಂಜಯ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.