ADVERTISEMENT

ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ

ಜಿಲ್ಲಾ ರೆಡ್ಡಿ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳ ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2019, 10:12 IST
Last Updated 4 ಡಿಸೆಂಬರ್ 2019, 10:12 IST
ಅತ್ಯಾಚಾರ ಹಾಗೂ ಕೊಲೆ ಆರೋಪಿಗಳಿಗೆ ಉಗ್ರ ಶಿಕ್ಷೆ ನೀಡುವ ಕಾನೂನು ರೂಪಿಸುವಂತೆ ಆಗ್ರಹಿಸಿ ಜಿಲ್ಲಾ ರೆಡ್ಡಿ ಸಮಾಜ ವಿವಿಧ ಸಂಘ–ಸಂಸ್ಥೆಗಳು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು
ಅತ್ಯಾಚಾರ ಹಾಗೂ ಕೊಲೆ ಆರೋಪಿಗಳಿಗೆ ಉಗ್ರ ಶಿಕ್ಷೆ ನೀಡುವ ಕಾನೂನು ರೂಪಿಸುವಂತೆ ಆಗ್ರಹಿಸಿ ಜಿಲ್ಲಾ ರೆಡ್ಡಿ ಸಮಾಜ ವಿವಿಧ ಸಂಘ–ಸಂಸ್ಥೆಗಳು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು   

ಯಾದಗಿರಿ: ಪಶುವೈದ್ಯೆ ಮೇಲೆ ಅತ್ಯಾಚಾರ ಮಾಡಿದ ಆರೋಪಿಗಳಿಗೆ ಮರಣದಂಡನೆ ನೀಡಬೇಕು. ಅತ್ಯಾಚಾರ ಹಾಗೂ ಕೊಲೆಆರೋಪಿಗಳಿಗೆ ಉಗ್ರ ಶಿಕ್ಷೆ ನೀಡುವ ಕಾನೂನು ರೂಪಿಸುವಂತೆ ಆಗ್ರಹಿಸಿ ಜಿಲ್ಲಾ ರೆಡ್ಡಿ ಸಮಾಜ, ಇತರ ಸಂಘ–ಸಂಸ್ಥೆಗಳ ಸಹಯೋಗದಿಂದ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು.

ಜಿಲ್ಲಾಧಿಕಾರಿ ಮುಖಾಂತರ ಮನವಿ ಪತ್ರ ಸಲ್ಲಿಸಿದ ಮಠಾಧೀಶರು ಹಾಗೂ ಮುಖಂಡರ ನಿಯೋಗ, ಭಾರತ ದೇಶ ಸಹಸ್ರಾರು ವರ್ಷಗಳಿಂದ ಹೆಣ್ಣನ್ನುಮಾತೃ ಸ್ವರೂಪದಲ್ಲಿ ಪೂಜಿಸುತ್ತಾ ಬಂದಿರುವ ಪುಣ್ಯಭೂಮಿ. ಪ್ರಜ್ಞಾವಂತ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆಗಳು ನಡೆಯುತ್ತಿ ರುವುದು ವಿಷಾದನೀಯ.ಅತ್ಯಾಚಾರ ಮಾಡಿ ಜೀವಂತವಾಗಿ ಸುಟ್ಟು ಹಾಕುವ ಮಟ್ಟಕ್ಕೆ ಇಳಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಂಧಿಸಿದ ಆರೋಪಿಗಳಿಗೆ ಸಾರ್ವಜನಿಕವಾಗಿಗಲ್ಲಿಗೇರಿಸಿ, ದೇಶದ ಕಾನೂನು ಸಶಕ್ತವಾಗಿದೆ ಎಂದು ತೋರಿಸುವಅವಶ್ಯಕತೆಯಿದೆ. ದೇಶದ ನ್ಯಾಯ ವ್ಯವಸ್ಥೆ ಬಿಗಿಯಾಗಬೇಕು. ದೇಶದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆಸೂಕ್ತ ಕಟ್ಟೆಚ್ಚರ ವಹಿಸಿ, ಮಕ್ಕಳಲ್ಲಿ ನೈತಿಕತೆಮಾನವೀಯ ಅನುಕಂಪ ಬಿತ್ತುವ ಶಿಕ್ಷಣ ವ್ಯವಸ್ಥೆ ಜಾರಿಗೆತರಬೇಕೆಂದು ಆಗ್ರಹಿಸಿತು.

ADVERTISEMENT

ಗುರುಮಠಕಲ್ ಖಾಸಾಮಠದ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮೀಜಿ, ಹೆಡಗಿಮದ್ರಾ ಶಾಂತ ಶಿವಯೋಗೀಶ್ವರಮಠದ ಶಾಂತಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯಸ್ವಾಮೀಜಿ ನೇತೃತ್ವ ವಹಿಸಿದ್ದರು.

ವಿಧಾನಪರಿಷತ್ ಮಾಜಿ ಸದಸ್ಯ ಚನ್ನಾರೆಡ್ಡಿ ಪಾಟೀಲ ತುನ್ನೂರ, ರಾಚಣ್ಣಗೌಡ ಮುದ್ನಾಳ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಾಗರತ್ನ ಕುಪ್ಪಿ, ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ರೋಟರಿ ಕ್ಲಬ್ ಅಧ್ಯಕ್ಷ ಸೋಮನಾಥ ಜೈನ್, ನಗರಸಭೆ ಮಾಜಿ ಅಧ್ಯಕ್ಷ ಶಶಿಧರರೆಡ್ಡಿ ಹೊಸಳ್ಳಿ, ಮಲ್ಲಣ್ಣಗೌಡ ಹಳಿಮನಿ ಕೌಳೂರ, ಅಯ್ಯಣ್ಣ ಹುಂಡೇಕಾರ, ಡಾ.ಸಿದ್ದರಾಜರೆಡ್ಡಿ, ಬಸ್ಸುಗೌಡಬಿಳ್ಹಾರ, ಬಸವಂತ ರಾಯಗೌಡ ವಡವಡಗಿ, ಜಗನ್ನಾಥರೆಡ್ಡಿ ಸಂಬರ, ಆರ್ .ಮಹಾದೇವಪ್ಪಗೌಡ ಅಬ್ಬೆ ತುಮಕೂರ,ಸಿದ್ದಣ್ಣಗೌಡ ಕೋಡಾಲ, ಜಯಪ್ರಕಾಶ ಮಾಲಿ ಪಾಟೀಲ ನಾಲವಾರ, ಶರಣಗೌಡ,ಡಾ.ಸಿದ್ದವೀರಪ್ಪಗೌಡ, ಮಲ್ಲರೆಡ್ಡಿ ಸಾಹು ತಂಗಡಗಿ,ಯಲ್ಲಾಲಿಂಗರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.