ADVERTISEMENT

dnp ಯಾದಗಿರಿ: ವೈದ್ಯಾಧಿಕಾರಿಯಿಂದ ಕಿರುಕುಳದ ಆರೋಪ

ಕಲ್ಲದೇವನಹಳ್ಳಿ: ಕ್ರಮಕ್ಕೆ ಆಗ್ರಹಿಸಿ ಆರೋಗ್ಯಾಧಿಕಾರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 6:00 IST
Last Updated 25 ಜನವರಿ 2023, 6:00 IST
ಹುಣಸಗಿ ತಾಲ್ಲೂಕಿನ ಕಲ್ಲದೇವನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಆರ್.ವಿ.ನಾಯಕ ಅವರಿಗೆ ಮನವಿ ಸಲ್ಲಿಸಿದರು
ಹುಣಸಗಿ ತಾಲ್ಲೂಕಿನ ಕಲ್ಲದೇವನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಆರ್.ವಿ.ನಾಯಕ ಅವರಿಗೆ ಮನವಿ ಸಲ್ಲಿಸಿದರು   

ಹುಣಸಗಿ: ತಾಲ್ಲೂಕಿನ ಕಲ್ಲದೇವನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸಿಬ್ಬಂದಿ ಅನಗತ್ಯವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸುವುದರ ಜತೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸಿಬ್ಬಂದಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಆರ್.ವಿ.ನಾಯಕ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಈ ಕುರಿತು ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷ ಅಧ್ಯಕ್ಷ ಹಣಮಂತ್ರಾಯ ಬಿರಾದಾರ ಹಾಗೂ ಉಪಾಧ್ಯಕ್ಷ ನಿಂಗಣ್ಣ ಬೇವಿನಗಿಡದ ಮಾತನಾಡಿ, ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಆಡಳಿತಾಧಿಕಾರಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಢುವ ಮೂಲಕ ಮಾನಸಿಕ ನೆಮ್ಮದಿ ಹಾಳು ಮಾಡುತ್ತಿದ್ದಾರೆ. ಮೇಲಾಧಿಕಾರಿಗಳು ಸಮಸ್ಯೆಗೆ ಸ್ಪಂಧಿಸುವ ಮೂಲಕ ಸಮಸ್ಯೆಗೆ ಇತ್ಯರ್ಥ ಮಾಡಬೇಕು ಎಂದರು.

ಕಾರ್ಯಕ್ರಮಗಳ ಗುರಿ ಮುಟ್ಟುವಲ್ಲಿ ಶ್ರಮಿಸುತ್ತಿದ್ದರೂ ವೈದ್ಯರು ಪ್ರತಿನಿತ್ಯ ನೌಕರರಿಗೆ ಬೆದರಿಕೆ ಹಾಕಿ ಮಾನಸಿಕ ಹಿಂಸೆ ನೀಡುವ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಎಂದು ಸಿಬ್ಬಂದಿ ಆಗ್ರಹಿಸಿದರು.

ADVERTISEMENT

ಮನವಿ ಸ್ವೀಕರಿಸಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ. ನಾಯಕ, ಎಲ್ಲರೂ ಸಂಯಮದಿಂದ ಕಾರ್ಯನಿರ್ವಹಿಸಬೇಕು. ಮನವಿಯನ್ನು ಮೇಲಾಧಿಕಾರಿಗಳಿಗೆ ಕಳಿಸಿಕೊಡುತ್ತೇವೆ ಎಂದು ತಿಳಿಸಿದರು.

‘ರಾಷ್ಟ್ರೀಯ ಕಾರ್ಯಕ್ರಮ ಸರಿಯಾದ ರೀತಿಯಲ್ಲಿ ನಿರ್ವಹಿಸಿ ಗುರಿ ಸಾಧಿಸುವಂತೆ ನೋಡಿಕೊಳ್ಳುವಂತೆ ಎಲ್ಲರಿಗೂ ತಿಳಿವಳಿಕೆ ನೀಡಲಾಗಿದೆ’ ಎಂದು ಪ್ರಜಾವಾಣಿಗೆ ಮಾಹಿತಿ ನೀಡಿದರು.

ವೈದ್ಯಕೀಯ ಶಿಕ್ಷಣ ಸಂಸ್ಥೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಘದ ಅಧ್ಯಕ್ಷ ಭೀಮನಗೌಡ ಪಾಟೀಲ, ಡಾ. ಸುನಿತಾ ಸಜ್ಜನ, ಆಯುಷ್ ವೈದ್ಯಾಧಿಕಾರಿ ದೇವಿಂದ್ರಮ್ಮ, ಶ್ರೀನಾಥ, ಕಲಾವತಿ ಅನ್ನಪೂರ್ಣ, ಗೀತಾಬಾಯಿ, ನೀಲಕಂಠ, ಧರ್ಮಣ್ಣಗೌಡ, ಹಣಮಂತ, ಚಂದ್ರಶೇಖರ, ಚಂದ್ರಕಾಂತ ಹಿಟ್ಟಿನಹಳ್ಳಿ, ಲಲಿತಾ, ರೇಣುಕಾ, ಪಾರ್ವತಿ, ಆಯಿಷಾಬಾನು, ವಿರೂಪಾಕ್ಷಮ್ಮ, ವಾಣಿಶ್ರೀ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.