ADVERTISEMENT

ಕೃಷ್ಣಾ ನದಿಗೆ 2.20 ಲಕ್ಷ ಕ್ಯುಸೆಕ್ ನೀರು ಬಿಡುಗಡೆ: ಸೇತುವೆ ಮುಳುಗಡೆ ಮುನ್ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2020, 4:56 IST
Last Updated 8 ಆಗಸ್ಟ್ 2020, 4:56 IST
ಯಾದಗಿರಿ ಜಿಲ್ಲೆಯ ಬಸವಸಾಗರ ಜಲಾಶಯದಿಂದ 21 ಗೇಟ್ ಗಳ ಮೂಲಕ ಕೃಷ್ಣಾ ನದಿಗೆ ನೀರು ಹರಿಸಲಾಗುತ್ತಿದೆ
ಯಾದಗಿರಿ ಜಿಲ್ಲೆಯ ಬಸವಸಾಗರ ಜಲಾಶಯದಿಂದ 21 ಗೇಟ್ ಗಳ ಮೂಲಕ ಕೃಷ್ಣಾ ನದಿಗೆ ನೀರು ಹರಿಸಲಾಗುತ್ತಿದೆ   

ಯಾದಗಿರಿ: ಜಿಲ್ಲೆಯ ನಾರಾಯಣಪುರ ಬಸವಸಾಗರ ಜಲಾಶಯದಿಂದ ಶನಿವಾರ ಬೆಳಿಗ್ಗೆ 10 ಗಂಟೆಗೆ 2.20 ಲಕ್ಷ ಕ್ಯುಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗುವುದು ಜಲಾಶಯ ಅಧಿಕಾರಿಗಳು ತಿಳಿಸಿದ್ದಾರೆ.

ನದಿಗೆ 2.50 ಲಕ್ಷ ಕ್ಯುಸೆಕ್ ನೀರು ಹರಿಸಿದರೆ ಶಹಾಪುರ ತಾಲ್ಲೂಕಿನ ಕೊಳ್ಳೂರ (ಎಂ) ಸೇತುವೆ ಮುಳುಗಡೆಯಾಗಲಿದೆ. ಈಗಾಗಲೇ ಸೇತುವೆ ಮೇಲೆ ಭಾರಿ ವಾಹನ, ಬಸ್ ಸಂಚಾರ ಕಡಿತಗೊಳಿಸಲಾಗಿದೆ. ಖಾಸಗಿ ವಾಹನಗಳು ಮಾತ್ರ ಸಂಚಾರ ನಡೆಸುತ್ತಿವೆ. ಬ್ಯಾರಿಕೇಡ್ ಹಾಕಲಾಗಿದೆ ಮತ್ತು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಮತ್ತೆ ಪ್ರವಾಹದ ಆತಂಕ: ಕಳೆದ ವರ್ಷ ಪ್ರವಾಹದಿಂದ ತತ್ತರಿಸಿದ್ದ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಕೃಷ್ಣಾ ನದಿ ಪಾತ್ರದ 23 ಹಳ್ಳಿಗಳ ಜಮೀನು ಮುಳುಗಡೆ ಭೀತಿ ಎದುರಾಗಿದೆ.

ADVERTISEMENT

ನಾರಾಯಣಪುರ ಜಲಾಶಯದ ಮಟ್ಟ (ಆಗಸ್ಟ್-8)

ಜಲಾಶಯ ಗರಿಷ್ಠ ಮಟ್ಟ ಶನಿವಾರದ ಮಟ್ಟ ಒಳಹರಿವು (ಕ್ಯುಸೆಕ್‌ಗಳಲ್ಲಿ) ಹೊರಹರಿವು
ನಾರಾಯಣಪುರ 492.25 ಮೀ 490.80ಮೀ 180000 200180

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.