ADVERTISEMENT

ಕೆಂಭಾವಿ: ಕಲುಷಿತ ನೀರು ಸೇವಿಸಿ ವಸತಿ ನಿಲಯ ವಿದ್ಯಾರ್ಥಿಗಳು ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2023, 7:28 IST
Last Updated 30 ಸೆಪ್ಟೆಂಬರ್ 2023, 7:28 IST
<div class="paragraphs"><p>ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳು</p></div>

ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳು

   

ಕೆಂಭಾವಿ (ಯಾದಗಿರಿ ಜಿಲ್ಲೆ): ಸುರಪುರ ತಾಲ್ಲೂಕಿನ ಕೆಂಭಾವಿ ಸಮೀಪದ ಯಕ್ತಾಪುರ ಗ್ರಾಮದ ಕಸ್ತೂರಬಾ ವಸತಿ ನಿಲಯದಲ್ಲಿ ಕಲುಷಿತ ನೀರು ಸೇವಿಸಿ 29 ವಿದ್ಯಾರ್ಥಿಗಳಿಗೆ ಅಸ್ವಸ್ಥಗೊಂಡಿದ್ದಾರೆ‌. ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ತಾಲ್ಲೂಕು ವೈದ್ಯಾಧಿಕಾರಿ ಆರ್.ವಿ. ನಾಯಕ ಭೇಟಿ ನೀಡಿ ಪರಿಶೀಲಿಸಿದ್ದಾರೆ.‌

ಈ ವೇಳೆ ಮಾತನಾಡಿದ ಅವರು, 'ಕಸ್ತೂರಬಾ ವಸತಿ ಶಾಲೆಯ ವಿದ್ಯಾರ್ಥಿಗಳು ಶನಿವಾರ ಬೆಳಿಗ್ಗೆ ಚಹಾ ಬಿಸ್ಕತ್ತು ಸೇವಿಸಿದ ಕೆಲವರಿಗೆ ವಾಂತಿಯಾಗಿದೆ. ಇನ್ನೂ ಕೆಲವರಿಗೆ ಹೊಟ್ಟೆನೋವು ಕಾಣಿಕೊಂಡಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ ಆರೋಗ್ಯವಾಗಿದ್ದಾರೆ. ನೀರು, ಚಹಾ, ಬಿಸ್ಕತ್ತು ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು. ವರದಿ ಬಂದ ನಂತರ ಸಂಪೂರ್ಣ ಮಾಹಿತಿ ತಿಳಿದು ಬರಲಿದೆ' ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.