
ಹುಣಸಗಿ: ‘ತಾಲ್ಲೂಕಿನ ಮಾಳನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರಲಬಾವಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆದರೆ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸುತ್ತಿಲ್ಲ’ ಎಂದು ಗ್ರಾಮದ ಪ್ರಕಾಶ ಬಡಿಗೇರ ಆರೋಪಿಸಿದರು.
‘ಈ ಕುರಿತು ಸೋಮವಾರ ಮಧ್ಯಾಹ್ನ ಮಾರಲಬಾವಿ ಗ್ರಾಮದ ಜನರು ಮಹಿಳೆಯೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರೂ ಅಲ್ಲಿ ಸ್ಥಳಿಯವಾಗಿ ಯಾರೂ ಲಭ್ಯವಾಗಿಲ್ಲ. ಇದರಿಂದಾಗಿ ಜನತೆ ರೋಸಿ ಹೋಗಿದ್ದಾರೆ’ ಎಂದರು.
‘ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸಂಪರ್ಕಿಸಿದರೂ ಕೂಡಾ ಸಮಸ್ಯೆ ಪರಿಹಾರಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಇದೇ ಸ್ಥಿತಿ ಮುಂದುವರೆದರೆ ಮುಂದಿನ ದಿನಗಳಲಿ ಉಗ್ರ ಹೊರಾಟ ಮಾಡಬೇಕಾಗುತ್ತದೆ’ ಎಂದು ರಾಜ್ಯ ರೈತ ಸಂಘದ ಪ್ರಮುಖ ದೇವೇಗೌಡ ಮಾಲಿ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ತಹಶೀಲ್ದಾರ್ ಎಂ.ಬಸವರಾಜ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತನಾಡಿ, ಶೀಘ್ರವೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಳನೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ, ಶಂಕ್ರಪ್ಪ,
ಮಾರಲಬಾವಿ ಗ್ರಾಮದ ದೇವಪ್ಪ ಪೂಜಾರಿ, ರಮೇಶ ಕೋಳೂರ, ಬಸಣ್ಣ ಕಟ್ಟಿಮನಿ, ಹುಲಗಪ್ಪ ಕರಿಗೌಡ್ರ, ದೇವಿಂದ್ರ ವಿಶ್ವಕರ್ಮ, ಹುಗಲಗಪ್ಪ ಬೂದಿಹಾಳ, ಪರಶುರಾಮ, ಭೀಮಾಶಂಕರ ಸುಬೇದಾರ, ದೇವೇಗೌಡ ಪಾಟೀಲ ರುದ್ರಮ್ಮ ಹಿರೇಮಠ, ನೀಲಮ್ಮ ಕೋಳೂರ ಸೇರಿದಂತೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.