
ಹುಣಸಗಿ: ‘ರಾಜ್ಯದಲ್ಲಿರುವ ಐತಿಹಾಸಿಕ ಸ್ಮಾರಕಗಳು ಮತ್ತು ದೇವಾಲಯಗಳನ್ನು ನಿರ್ಮಿಸಿದ ಕೀರ್ತಿ ಅಮರಶಲ್ಪಿ ಜಕಣಾಚಾರಿ ಅವರಿಗೆ ಸಲ್ಲುತ್ತದೆ’ ಎಂದು ಶಾಲೆಯ ಮುಖ್ಯಶಿಕ್ಷಕ ಮನೋಹರ ಪತ್ತಾರ ಹೇಳಿದರು.
ಹುಣಸಗಿ ತಾಲ್ಲೂಕಿನ ವಜ್ಜಲ ತಾಂಡಾದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
‘ತಮ್ಮ ನಯ, ನಾಜೂಕಾದ ಕಲೆಯ ಮೂಲಕ ವಿಶಿಷ್ಟವಾದ ಮೂರ್ತಿಗಳನ್ನು, ಚಿತ್ತಾರಗಳನ್ನು ಸೃಷ್ಟಿಸಿ ಅಮೋಘವಾದ ಹಾಗೂ ದೈವದತ್ತವಾಗಿರುವ ಶಿಲ್ಪಗಳನ್ನು ರೂಪಿಸಿದ್ದಾರೆ. ಇಂದಿಗೂ ಅವರ ಕಲಾ ಪ್ರೌಢಿಮೆ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಿದೆ’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ವೀರಪ್ಪ ಹಡಪದ, ಭೀಮಾಬಾಯಿ, ಸುನೀತಾ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.