ADVERTISEMENT

ಹುಣಸಗಿ: 12 ಮಹಿಳಾ ಅಧ್ಯಕ್ಷರು; 10 ಸದಸ್ಯೆಯರು ಉಪಾಧ್ಯಕ್ಷರಾಗಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2021, 5:31 IST
Last Updated 6 ಫೆಬ್ರುವರಿ 2021, 5:31 IST
ಹುಣಸಗಿ ತಾಲ್ಲೂಕಿನ ರಾಜನಕೋಳೂರ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಬಳಿಕ ಸನ್ಮಾನ ಕಾರ್ಯಕ್ರಮ ನಡೆಯಿತು
ಹುಣಸಗಿ ತಾಲ್ಲೂಕಿನ ರಾಜನಕೋಳೂರ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಬಳಿಕ ಸನ್ಮಾನ ಕಾರ್ಯಕ್ರಮ ನಡೆಯಿತು   

ಹುಣಸಗಿ: ತಾಲ್ಲೂಕು ಸೇರಿದಂತೆ ಜಿಲ್ಲೆಯಲ್ಲಿಯೇ ಕುತೂಹಲ ಕೆರಳಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಸುಸೂತ್ರವಾಗಿ ನಡೆದಿದ್ದು, ಎಲ್ಲೆಡೆ ಶಾಂತ ರೀತಿಯಲ್ಲಿಯೇ ಚುನಾವಣೆ ಮುಕ್ತಾಯವಾಗಿದೆ.

ಕಳೆದ ಎರಡು ವಾರಗಳಿಂದಲೂ, ಪ್ರವಾಸ, ತೀರ್ಥ ಕ್ಷೇತ್ರ ದರ್ಶನದ ಬಳಿಕ ಸದಸ್ಯರು ಪಂಚಾಯಿತಿಗೆ ಆಗಮಿಸಿದ್ದಾರೆ. ತಾಲ್ಲೂಕಿನ 18 ಗ್ರಾಮ ಪಂಚಾಯಿತಿಗಳಲ್ಲಿ 12 ಅಧ್ಯಕ್ಷ ಸ್ಥಾನಗಳನ್ನು ಮಹಿಳಾ ಸದಸ್ಯರೇ ಪಡೆದುಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇನ್ನು 10 ಸದಸ್ಯೆಯರು ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಗ್ರಾ.ಪಂ.ನಲ್ಲಿ ಮಹಿಳಾ ಪ್ರಾಬಲ್ಯ ಮೆರೆದಿದ್ದಾರೆ.

ತಾಲ್ಲೂಕಿನ ಬರದೇವನಾಳ ಮತ್ತು ಮುದನೂರು, ಮಾಳನೂರ ಗ್ರಾ.ಪಂ. ಅಧ್ಯಕ್ಷ ಉಪಾಧ್ಯಕ್ಷ ಎರಡೂ ಸ್ಥಾನಗಳನ್ನು ಮಹಿಳೆಯರೇಪಡೆದುಕೊಂಡಿದ್ದಾರೆ.

ADVERTISEMENT

ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಕ್ತಾಯವಾಗುತ್ತಿದ್ದಂತೆ ಬೆಂಬಲಿಗರು ಹಾಗೂ ಮುಖಂಡರು ಪರಸ್ಪರ ಗುಲಾಲು ಎರಚಿ ಸಂಭ್ರಮಿಸಿದರೆ ಕೆಲ ಗ್ರಾಮಗಳಲ್ಲಿ ಪಟಾಕಿ ಸಿಡಿಸಿ ವೃತ್ತಗಳಿಗೆ ತೆರಳಿ ಪೂಜೆ ಸಲ್ಲಿಸಿದರು.

ಮಾಳನೂರ, ಗೆದ್ದಲಮರಿ, ಬೈಲಕುಂಟಿ, ಮಾರನಾಳ, ಮುದನೂರ, ಅರಕೇರಾ(ಜೆ), ಬೈಚಬಾಳ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷಸ್ಥಾನಗಳಿಗೆ ಚುನಾವಣೆ ನಡೆದರೆ ಉಳಿದ ಗ್ರಾ.ಪಂ.ಗಳಲ್ಲಿ ಅವಿರೋಧ ಆಯ್ಕೆ ನಡೆಯಿತು ಎಂದು ಮೂಲಗಳಿಂದ ತಿಳಿದು ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.