ಹುಣಸಗಿ: ಕೃಷ್ಣಾ ನದಿ ಪಾತ್ರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ.
ಬುಧವಾರ ಸಂಜೆ 17 ಗೇಟ್‌ಗಳ ಮೂಲಕ 51,475 ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ನೀರು ಹರಿಸಲಾಗಿದೆ ಎಂದು ಅಣೆಕಟ್ಟೆ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಿಗ್ಗೆ 30 ಸಾವಿರ ಕ್ಯೂಸೆಕ್ ಇದ್ದ ಒಳಹರಿವು ಸಂಜೆ ಹೊತ್ತಿಗೆ 50 ಸಾವಿರ ಕ್ಯೂಸೆಕ್ ದಾಖಲಾಗಿದೆ. ರಾತ್ರಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುವ ನಿರಿಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಲಾಶಯದ ಮಟ್ಟ 490.49 ಮೀ ಕಾಯ್ದುಕೊಂಡು ಹೆಚ್ಚಿನ ಪ್ರಮಾಣದ ನೀರನ್ನು ಹರಿಸಲಾಗುತ್ತಿದೆ. ರಾತ್ರಿ 75 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.
ಸದ್ಯ ಶೇ77.60 (25.84) ಟಿಎಂಸಿ ಅಡಿ ನೀರು ಸಂಗ್ರವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.