ಹುಣಸಗಿ: ಪಟ್ಟಣವನ್ನು ಸ್ವಚ್ಚ ಹಾಗೂ ಸುಂದರವಾಗಿರಿಸಲು ಅಧಿಕಾರಿಗಳೊಂದಿಗೆ ಇಲ್ಲಿನ ಸ್ಥಳೀಯರು ಕೈಜೋಡಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಸವರಾಜ ಸಜ್ಜನ ಹೇಳಿದರು.
ಹುಣಸಗಿ ಪಟ್ಟಣ ಪಂಚಾಯಿತಿಯಿಂದ ಸ್ವಚ್ಚ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ನಡೆದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
‘ಪಟ್ಟಣದ ನಿವಾಸಿಗಳು ಕಸವನ್ನು ತಮ್ಮ ಮನೆಯಲ್ಲಿಯೇ ಶೇಖರಿಸಿಕೊಟ್ಟುಕೊಂಡು ನಿರ್ಧಿಷ್ಟಪಡಿಸಿದ ಸ್ಥಳ ಅಥವಾ ಸ್ವಚ್ಚತಾ ವಾಹನ ಆಗಮಿಸಿದಾಗ ಅವರಿಗೆ ನೀಡುವ ಮೂಲಕ ಸ್ವಚ್ಚತೆಗೆ ಆದ್ಯತೆ ನೀಡುವುದು ಅಗತ್ಯ’ ಎಂದರು.
‘ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಮೂಲಕ ಪರಿಸರ ಕಾಳಜಿಯನ್ನು ಎಲ್ಲರೂ ಅಳವಡಿಸಿಕೊಳ್ಳೋಣ’ ಎಂದು ಹೇಳಿದರು.
ಪಟ್ಟಣದ ಪೌರಕಾರ್ಮಿಕರು ಕೆಲ ಭಾಗಗಳಲ್ಲಿ ಸ್ವಚ್ಚತಾ ಕಾರ್ಯ ಕೈಗೊಂಡು ಅಲ್ಲಿ ರಂಗೋಲಿ ಬಿಡಿಸಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಕಿರಿಯ ಆರೋಗ್ಯ ನಿರಿಕ್ಷಕರ ಶಿವಕುಮಾರ, ಬೋರಮ್ಮ ಯಡಿಯೂರಮಠ, ಸಿಬ್ಬಂದಿ, ಕಾರ್ಮಿಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.