ADVERTISEMENT

ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್‌ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2023, 16:04 IST
Last Updated 17 ಜುಲೈ 2023, 16:04 IST
   

ಯಾದಗಿರಿ: ಜಿಲ್ಲಾಧಿಕಾರಿ ಸ್ನೇಹಲ್‌ ಆರ್‌., ಅವರು ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಗದಗ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಡಾ.ಸುಶೀಲಾ ಬಿ., ನೇಮಕವಾಗಿದ್ದಾರೆ.

2015ರ ಬ್ಯಾಚಿನ ಐಎಎಸ್‌ ಅಧಿಕಾರಿಯಾದ ಡಾ.ಸುಶೀಲಾ ಅವರು ಗದಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಜಿಲ್ಲಾಧಿಕಾರಿಯಾಗಿದ್ದ ಸ್ನೇಹಲ್‌ ಆರ್‌., ಅವರು 2022ರ ಜೂನ್‌ 4ರಂದು ಯಾದಗಿರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. 13 ತಿಂಗಳ ನಂತರ ವರ್ಗಾವಣೆಯಾಗಿದ್ದಾರೆ. ಆದರೆ, ಸ್ಥಳ ನಿಯೋಜನೆ ಮಾಡಿಲ್ಲ. ಪ್ರತಿ ಗುರುವಾರವೂ ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡುತ್ತಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.