ಯರಗೋಳ (ಯಾದಗಿರಿ ಜಿಲ್ಲೆ): ಹೊನಗೇರಾ ಗ್ರಾಮಕ್ಕೆ ತೆರಳುವ ಬಂದಳ್ಳಿ ಗ್ರಾಮದ ರಸ್ತೆಯಲ್ಲಿ ಸೋಮವಾರ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಗ್ರಾಮದ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಣಮಂತ ಬಸವರಾಜ (29), ಸಿದ್ದಪ್ಪ ಗುಂಜಲಪ್ಪ (30) ಆರೋಪಿಗಳಿಂದ ₹2,587 ಮೌಲ್ಯದ ಅಕ್ರಮ ಮದ್ಯದ ಬಾಟಲಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಯಾದಗಿರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.