ADVERTISEMENT

ಮರಂ ಅಕ್ರಮ ಗಣಿಗಾರಿಕೆ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ: ವರದಿ ಸಲ್ಲಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2025, 6:27 IST
Last Updated 25 ಜುಲೈ 2025, 6:27 IST
ಸೈದಾಪುರ ಸಮೀಪದ ಕಡೇಚೂರು ಗ್ರಾಮದಲ್ಲಿ ಮರಂ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎನ್ನಲಾದ ಸ್ಥಳಕ್ಕೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು
ಸೈದಾಪುರ ಸಮೀಪದ ಕಡೇಚೂರು ಗ್ರಾಮದಲ್ಲಿ ಮರಂ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎನ್ನಲಾದ ಸ್ಥಳಕ್ಕೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು   

ಕಡೇಚೂರು (ಸೈದಾಪುರ ): ಇಲ್ಲಿಗೆ ಸಮೀಪದ ಕಡೇಚೂರು ಗ್ರಾಮದಲ್ಲಿ ಮರಂ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎನ್ನಲಾದ ಸ್ಥಳಕ್ಕೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಕಡೇಚೂರು ಗ್ರಾಮದ ಸರ್ವೆ ನಂ.421, 423/4, 425 ಮತ್ತು 418/2/3ರ ಜಮೀನುಗಳಲ್ಲಿನ ಮರಂ ಅಕ್ರಮ ಗಣಿಗಾರಿಕೆ ಮತ್ತು ಸಾಗಣೆಗೆ ಸಂಬಂಧಿಸಿದ ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡವನ್ನು ರಚಿಸಿ ಕೂಡಲೇ ವರದಿ ಸಲ್ಲಿಸಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಹಿರಿಯ ಭೂವಿಜ್ಞಾನಿ ಪೂರ್ಣಿಮಾ, ತಹಶೀಲ್ದಾರ್ ಸುರೇಶ ಅಂಕಲಗಿ ಸೇರಿದಂತೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.