
ಯಾದಗಿರಿ: ಜಿಲ್ಲೆಯಾದ್ಯಂತ ಮರಳು ಹಾಗೂ ಮದ್ಯ ಅಕ್ರಮ ಮಾರಾಟ ತಡೆಯುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ಅವರಿಗೆ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ, ಪ್ರಮುಖರಾದ ದೊಡ್ಡಯ್ಯ ಟೋಕಪುರ, ಅಮತಪ್ಪ, ಪ್ರಭು ಕೊಂಗಂಡಿ ಸೇರಿದಂತೆ ಇತರರು ಮನವಿ ಸಲ್ಲಿಸಿದರು.
ಟ್ರ್ಯಾಕ್ಟರ್, ಟಿಪ್ಪರ್‌ಗಳ ಮೂಲಕ ಅಕ್ರಮವಾಗಿ ಮರಳು ಸಾಗಣೆ ಮಾಡಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಜೊತೆಗೆ ದೂಳಿನಿಂದಾಗಿ ಸಾರ್ವಜನಿಕರಿಗೆ ಉಸಿರಾಟ ಸಂಬಂಧಿತ ಕಾಯಿಲೆಗಳು ಬರತ್ತಿವೆ ಎಂದಿದ್ದಾರೆ.
ಅಕ್ರಮ ಮರಳು ಸಾಗಣೆ ಮಾಡುವವರು ಒಂದು ರಾಯಲ್ಟಿ ಪಡೆದು ಹತ್ತಾರು ಬಾರಿ ಮರಳು ಸಾಗಿಸುತ್ತಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿಲ್ಲ. ಇದನ್ನು ತಡೆಯೊಡ್ಡಲು ಜಿಪಿಎಸ್ ವ್ಯವಸ್ಥೆ, ಸಿಸಿ ಕ್ಯಾಮೆರಾ ಅಳವಡಿಕೆ, ಚೆಕ್‌ಪೋಸ್ಟ್ ನಿರ್ಮಿಸಬೇಕು ಎಂದು ಕೋರಿದ್ದಾರೆ.
ಅಕ್ರಮ ಮದ್ಯ ಮಾರಾಟವೂ ವ್ಯಾಪಕವಾಗಿ ನಡೆಯುತ್ತಿದೆ. ಹೋಟೆಲ್, ಅಂಗಡಿಗಳಲ್ಲಿ ಕಾನೂನಿನ ಭಯವಿಲ್ಲದೆ ಹೆಚ್ಚುವರಿ ದರಕ್ಕೆ ಮದ್ಯ ಮಾರಾಟವಾಗುತ್ತಿದೆ. ಇದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಲು ವಿಫಲವಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಈ ವೇಳೆ ಮುಖಂಡರಾದ ಹನುಮಂತ, ಶ್ರೀನಿವಾಸ್ ಶಿವಪುರ, ರಮೇಶ್ ಹಾಲಗೇರ, ಹನುಮಂತರಾಯ, ಶರಣು ಗೊಂದೇನೂರು, ಪಿಡ್ಡಪ್ಪ ನಾಯಕ್, ತಿಪ್ಪಣ್ಣ ಗೋವಿಂದ್ ರಾಜ್, ಮಹೀಬೂಬ್ ಸಾಹುಕಾರ್, ಅಬ್ದುಲ್ ಸಾಬ್
ಖಾಜಾ ಹುಸೇನ್ ಸೇರಿ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.