ಸುರಪುರ: ತಾಲ್ಲೂಕಿನ ಚೌಡೇಶ್ವರಿಹಾಳ ಮತ್ತು ಹೆಮ್ಮಡಗಿ ಗ್ರಾಮ ಸೇರಿ ಒಟ್ಟು ಮೂರು ಕಡೆ ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ಪೊಲೀಸರು ಸೋಮವಾರ ವಶಪಡಿಸಿಕೊಂಡಿದ್ದಾರೆ.
‘3272.50 ಕ್ಯೂಬಿಕ್ ಮೀಟರ್ ಮರಳು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ಅಂದಾಜು ₹52 ಲಕ್ಷ’ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಕಿರಣ ತಿಳಿಸಿದ್ದಾರೆ.
‘ಈ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ’ ಎಂದು ಪೊಲೀಸ್ ಇನ್‍ಸ್ಪೆಕ್ಟರ್ ಸುನೀಲಕುಮಾರ ಮೂಲಿಮನಿ ತಿಳಿಸಿದ್ದಾರೆ.
ಡಿವೈಎಸ್‍ಪಿ ಡಾ.ಬಿ.ದೇವರಾಜ, ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಲೋಕೋಪಯೋಗಿ, ಗಣಿ ಮತ್ತು ಭೂವಿಜ್ಞಾನ, ಕಂದಾಯ ಇಲಾಖೆ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.