
ವಡಗೇರಾ: ‘ಪ್ರತಿಯೊಬ್ಬರು ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ. ಸೋಲು ಗೆಲುವು ಸಾಮಾನ್ಯ’ ಎಂದು ವಡಗೇರಾ ತಾಲ್ಲೂಕು ಸರ್ಕಾರಿ ನೌಕಕರ ಅಧ್ಯಕ ಮಲ್ಲೇಶಪ್ಪ ಹೊಸಮನಿ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿವಿಧ ಕ್ರೀಡೆಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದ ಕ್ರೀಡಾಪಟುಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಜಿಲ್ಲಾ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ತಾಲ್ಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಿರಿ. ಹಾಗೆಯೆ ಮುಂಬರುವ ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲೆಯ ಹೆಸರನ್ನು ಪ್ರಜ್ವಲಿಸಬೇಕು’ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸನ್ಮಾನಿಸಿ ಪ್ರಶಂಸನಾ ಪತ್ರವನ್ನು ವಿತರಿಸುವುದರ ಜತೆಗೆ ವಿವಿಧ ಇಲಾಖೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಸನ್ಮಾನಿಸಿ ಪ್ರಮಾಣಗಳನ್ನು ವಿತರಿಸಲಾಯಿತು.
ಇದೆ ವೇಳೆ 2024-25 ನೇ ಸಾಲಿನ ವಾರ್ಷಿಕ ಖರ್ಚು ವೆಚ್ಚದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಸಾಹೇಬರಡ್ಡಿ ಇಟಗಿ , ಶರಣು ದೊಡ್ಮನಿ , ಪುತಳಿಬಾಯಿ ಎಚ್ ಬಿ ಬಂಡಿ, ಮಲ್ಲೇಶಿ, ಬಸವರಾಜ ಸಜ್ಜನ್ ತಾಲ್ಲೂಕಿನ ವಿವಿಧ ಇಲಾಖೆಯ ವೃಂದ ಸಂಘದ ಅಧ್ಯಕ್ಷರು, ಹಾಗೂ ವಿವಿಧ ಇಲಾಖೆಯ ನೌಕರರು ಇನ್ನಿತರರು ಇದ್ದರು.
ಕಾರ್ಯಕ್ರಮವನ್ನು ನಾಗಭೂಷಣ ನಿರೂಪಿಸಿದರೆ ಮಲ್ಲೇಶಿ ಅಭಿನಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.