ADVERTISEMENT

ಸ್ವಾತಂತ್ರ್ಯ ಅಮೃತ ಮಹೋತ್ಸವ: ದೇಶಭಕ್ತಿ ಗೀತೆಗಳ ಗಾಯನ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2021, 3:27 IST
Last Updated 11 ಆಗಸ್ಟ್ 2021, 3:27 IST
ಸ್ವಾತಂತ್ರ್ಯಅಮೃತ ಮಹೋತ್ಸವ 75 ಅಂಗವಾಗಿ ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು
ಸ್ವಾತಂತ್ರ್ಯಅಮೃತ ಮಹೋತ್ಸವ 75 ಅಂಗವಾಗಿ ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು   

ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿಯಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ- 75 ಅಂಗವಾಗಿ ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ದೀಪ ಬೆಳಗಿಸಿ ಚಾಲನೆ ನೀಡಿದರು.

ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಯೋಜನಾ ನಿರ್ದೇಶಕ ಸಲಾಂ ಹುಸೇನ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರಾಜ, ನಿರೂಪಕ ಗುರು ಪ್ರಸಾದ್ ವೈದ್ಯ ಇದ್ದರು.

ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನ:ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಸಾರ್ವಜನಿಕ ಗ್ರಂಥಾಲಯ ಇಲಾಖೆ ವ್ಯಾಪ್ತಿಯಡಿ ಬರುವ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಸೋಮವಾರ ಏರ್ಪಡಿಸಿದ್ದ ಪುಸ್ತಕ ಪ್ರದರ್ಶನಕ್ಕೆ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಎಚ್. ಜಯಪ್ರಕಾಶ ಅವರು ಚಾಲನೆ ನೀಡಿದರು.

ADVERTISEMENT

ಈ ವೇಳೆ ಮಾತನಾಡಿದ ಅವರು, ‘ಭಾರತ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಸ್ಮರಿಸುವುದು, ಅವರ ಜೀವನ ಚರಿತ್ರೆಯನ್ನು ಸಾರ್ವಜನಿಕರಿಗೆ ಹಾಗೂ ಮುಂದಿನ ಪೀಳಿಗೆಯ ಮಕ್ಕಳಿಗೆ ತಿಳಿಸುವುದು ಅತ್ಯಂತ ಅವಶ್ಯಕವಾಗಿದೆ. ಆಗಸ್ಟ್ 9ರಿಂದ 15ರವರೆಗೆ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದರು.

ಸಾರ್ವಜನಿಕರು ಮತ್ತು ಮಕ್ಕಳು ತಮ್ಮ ಹತ್ತಿರದ ಸಾರ್ವಜನಿಕ ಗ್ರಂಥಾಲಯಗಳಿಗೆ ಭೇಟಿ ನೀಡಿ ಸ್ವಾತಂತ್ರ್ಯ ಹೋರಾಟಗಾರರ ಪುಸ್ತಕಗಳನ್ನು ಪರಾಮರ್ಶಿಸಬಹುದಾಗಿದೆ ಎಂದು ತಿಳಿಸಿದರು.

ಈ ವೇಳೆ ಜಿಲ್ಲಾ ಕೇಂದ್ರ ಗ್ರಂಥಾಲಯ ಸಿಬ್ಬಂದಿ ಮತ್ತು ಓದುಗರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.