ADVERTISEMENT

‘ದಾಸ್ಯದಿಂದ ಮುಕ್ತಿ ಪಡೆದ ದಿನ’

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 11:17 IST
Last Updated 15 ಆಗಸ್ಟ್ 2022, 11:17 IST
ಸೈದಾಪುರದ ಗುರುಕುಲ ವಿದ್ಯಾಪೀಠ ಹಿರಿಯ ಪ್ರಾಥಮಿಕ ಸ್ವಾತಂತ್ರ್ಯ ದಿನದ ಅಂಗವಾಗಿ ಧ್ವಜಾರೋಹಣ ಮಾಡಲಾಯಿತು
ಸೈದಾಪುರದ ಗುರುಕುಲ ವಿದ್ಯಾಪೀಠ ಹಿರಿಯ ಪ್ರಾಥಮಿಕ ಸ್ವಾತಂತ್ರ್ಯ ದಿನದ ಅಂಗವಾಗಿ ಧ್ವಜಾರೋಹಣ ಮಾಡಲಾಯಿತು   

ಸೈದಾಪುರ: ‘ಬ್ರಿಟಿಷರ ದಾಸ್ಯದಿಂದ ಮುಕ್ತಿ ಪಡೆದು ದೇಶದ ಜನತೆ ಸ್ವಾಭಿಮಾನ ಸ್ವಾತಂತ್ರ್ಯ ಪಡೆದ ದಿನವಾಗಿದೆ’ ಎಂದು ಶ್ರೀಮಹರ್ಷಿ ವಾಲ್ಮೀಕಿ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್‌ ಅಧ್ಯಕ್ಷ ನಿವೃತ್ತ ವೈದ್ಯಾಧಿಕಾರಿ ಪ್ರಭು ಹುಲಿನಾಯಕ ಅಭಿಪ್ರಾಯಪಟ್ಟರು.

ಪಟ್ಟಣದ ಗುರುಕುಲ ವಿದ್ಯಾಪೀಠ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

‘ಅನೇಕ ಹೋರಾಟಗಾರರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಯುವಕರು ಹೋರಾಟಗಾರರ ಚರಿತ್ರೆ ಅಧ್ಯಯನ ಮಾಡಬೇಕು. ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ತಿಳಿಸಿದರು.

ADVERTISEMENT

ಟ್ರಸ್ಟ್‌ ಕಾರ್ಯದರ್ಶಿ ತಿಮ್ಮಾರೆಡ್ಡಿ (ರಾಜು) ದೊರೆ, ಮುಖ್ಯಶಿಕ್ಷಕ ಮಲ್ಲಿಕಾರ್ಜುನ, ಅಯ್ಯಣ್ಣ, ದೊಡ್ಡಯ್ಯ ಹಳಿಗೇರಿ, ಸಿದ್ಧಲಿಂಗಪ್ಪ ನಾಯಕ, ರಾಹುಲ್ ಹುಲಿನಾಯಕ, ಚಂದ್ರಶೇಖರ ಕರಣಿಗಿ, ಶಿಕ್ಷಕರಾದ ಮಹೇಶ್ವರಿ, ಮರಿಲಿಂಗಮ್ಮ, ನೇತ್ರಾವರಿ, ಆಸೀಫಾ, ಮಹೇಶ್ವರಿ, ಮಧು, ಉಮಾದೇವಿ, ಸುಕುಮಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.