ADVERTISEMENT

ಯಾದಗಿರಿ | ಸ್ವಾತಂತ್ರ್ಯೋತ್ಸವ: ಆನ್‍ಲೈನ್ ಮೂಲಕ ವೀಕ್ಷಣೆಗೆ ಅವಕಾಶ

ಸಾರ್ವಜನಿಕರು, ಮಕ್ಕಳು ಭಾಗವಹಿಸುವುದು ನಿರ್ಬಂಧ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2020, 16:53 IST
Last Updated 8 ಆಗಸ್ಟ್ 2020, 16:53 IST
ಎಂ.ಕೂರ್ಮಾರಾವ್
ಎಂ.ಕೂರ್ಮಾರಾವ್   

ಯಾದಗಿರಿ: ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದು. ದಿನಾಚರಣೆಯ ದೃಶ್ಯಾವಳಿಗಳನ್ನು ಆನ್‍ಲೈನ್ ಮೂಲಕ ಸಾರ್ವಜನಿಕರು ಮನೆಗಳಲ್ಲಿಯೇ ಕುಳಿತು ನೋಡುವ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಹೇಳಿದರು.

ಜಿಲ್ಲಾ ಪಂಚಾಯಿತಿಸಭಾಂಗಣದಲ್ಲಿ ಹಮ್ಮಿಕೊಂಡಿದ್ದಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಆಗಸ್ಟ್ 15 ರ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಧ್ವಜಾರೋಹಣ ನೆರವೇರಿಸುವರು. ಧ್ವಜಾರೋಹಣದ ಪರೇಡ್‍ನಲ್ಲಿ ಸುಮಾರು 6 ರಿಂದ 8 ತಂಡಗಳಿಗೆ ಅವಕಾಶ ಮಾಡಿಕೊಡಲಾಗುವುದು.ಅಂದು ನಡೆಯುವ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದರು.

ADVERTISEMENT

ಈ ಬಾರಿ ಸಾರ್ವಜನಿಕರು ಮತ್ತು ಮಕ್ಕಳು ಭಾಗವಹಿಸುವುದನ್ನು ನಿರ್ಬಂಧಿಸಲಾಗಿದೆ. ಕಾರ್ಯಕ್ರಮಕ್ಕೆ ಹಾಜರಾಗುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಅವರನ್ನು ಸ್ಕ್ರೀನಿಂಗ್‍ಗೆ ಒಳಪಡಿಸಲಾಗುವುದು, ಪರಸ್ಪರ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. 30 ಜನ ಕೋವಿಡ್ ವಾರಿಯರ್ಸ್‍ಗಳನ್ನು ಸನ್ಮಾನಿಸಲಾಗುವುದು. ಕೋವಿಡ್-19 ದಿಂದ ಗುಣಮುಖರಾದವರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ,ಪ್ರಭಾರಿ ಹೆಚ್ಚುವರಿಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಪ್ರೊಬೇಷನರಿ ಐಎಎಸ್ ಅಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಂಘ–ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.