ADVERTISEMENT

ಕೆಂಭಾವಿ | ಇಂದಿರಾ ಕ್ಯಾಂಟೀನ್ ಇಂದು ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2025, 7:41 IST
Last Updated 18 ಜುಲೈ 2025, 7:41 IST
ಕೆಂಭಾವಿ ಪಟ್ಟಣದ ಬಸ್ ನಿಲ್ದಾಣದ ಬಳಿ ಉದ್ಘಾಟನೆಗೆ ಸಿದ್ಧಗೊಂಡಿರುವ ಇಂದಿರಾ ಕ್ಯಾಂಟೀನ್ 
ಕೆಂಭಾವಿ ಪಟ್ಟಣದ ಬಸ್ ನಿಲ್ದಾಣದ ಬಳಿ ಉದ್ಘಾಟನೆಗೆ ಸಿದ್ಧಗೊಂಡಿರುವ ಇಂದಿರಾ ಕ್ಯಾಂಟೀನ್    

ಕೆಂಭಾವಿ: ‘ಪಟ್ಟಣದ ಬಸ್ ನಿಲ್ದಾಣದ ಬಳಿ ಸುಮಾರು ₹48 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಇಂದಿರಾ ಕ್ಯಾಂಟೀನ್ ಅನ್ನು ಜು.18ರಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಉದ್ಘಾಟಿಸಲಿದ್ದಾರೆ’ ಎಂದು ಪುರಸಭೆ ಮುಖ್ಯಾಧಿಕಾರಿ ಮಹ್ಮದ್ ಯುಸೂಫ್ ತಿಳಿಸಿದ್ದಾರೆ.

ಈ ಕುರಿತು ಗುರುವಾರ ಮಾಹಿತಿ ನೀಡಿದ್ದು, ಅಂದು ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದ್ದು ಸಚಿವ ರಹೀಂಖಾನ್, ಸಂಸದ ಜಿ.ಕುಮಾರನಾಯಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಪುರಸಭೆ ಅಧ್ಯಕ್ಷ ರೆಹಮಾನ ಪಟೇಲ ಯಲಗೋಡ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT