ಗುರುಮಠಕಲ್: ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಲವು ಸಮಸ್ಯೆಗಳಿದ್ದು, ಕೂಡಲೇ ಸಮಸ್ಯೆ ಪರಿಹರಿಸಲು ಕ್ರಮವಹಿಸುವಂತೆ ಕೈಗಾರಿಕಾ ತರಬೇತಿ ಇಲಾಖೆ ಅಧಿಕಾರಿಗಳಿಗೆ ಶಾಸಕ ಶರಣಗೌಡ ಕಂದಕೂರ ತಾಕೀತು ಮಾಡಿದರು.
ಪಟ್ಟಣದ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ವೇಳೆ ತಮ್ಮನ್ನು ಭೇಟಿಯಾದ ಐಟಿಐ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ, ಸಮಸ್ಯೆಗಳನ್ನು ಆಲಿಸಿದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಮಾತನಾಡಿದರು.
ಐಟಿಐ ಕಾಲೇಜಿನಲ್ಲಿ ಹಲವು ಸಮಸ್ಯೆಗಳಿರುವ ಕುರಿತು ವಿದ್ಯಾರ್ಥಿಗಳು ತಿಳಿಸಿದ್ದು, ಕೂಡಲೇ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ, ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಬೇಕು. ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮವಹಿಸಬೇಕು ಎಂದು ಸೂಚಿಸಿದರು.
ತರಬೇತಿ ಕೇಂದ್ರದಲ್ಲಿ ಅವಶ್ಯಕ ಸೌಲಭ್ಯ ಕಲ್ಪಿಸಬೇಕು. ಸಮಸ್ಯೆಗಳ ಪರಿಹಾರಕ್ಕೆ ಅಗತ್ಯವಿದ್ದರೆ ಶಾಸಕರ ಅನುದಾನವನ್ನೂ ನೀಡಲು ಸಿದ್ಧ ಎಂದು ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.