ಕೆಂಭಾವಿ: ಪಟ್ಟಣದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಶಾಸಕ ಶರಣಬಸಪ್ಪ ದರ್ಶನಾಪುರ ಪರಿಶೀಲಿಸಿದರು.
ನಂತರ ಮಾತನಾಡಿದ ಅವರು, ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 2019-20ನೇ ಸಾಲಿನ ಕೆಕೆಆರ್‌ಡಿಬಿ ಯೋಜನೆಯಡಿಯಲ್ಲಿ ₹ 1 ಕೋಟಿ ವೆಚ್ಚದಲ್ಲಿ 6 ಕೋಣೆಗಳ ನಿರ್ಮಾಣಕ್ಕೆ ಅನುದಾನ ನೀಡಿದ್ದು, ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಪದವಿ ಪೂರ್ವ ಕಾಲೇಜಿನಲ್ಲಿ ಆವರಣದಲ್ಲಿನ ನಿರುಪಯುಕ್ತ ಹಳೇ ಕೋಣೆಗಳನ್ನು ತೆಗೆದು ಹೊಸ 4 ಕೋಣೆಗಳ ನಿರ್ಮಾಣಕ್ಕೆ 2020-21ನೇ ಸಾಲಿನ ಕೆಕೆಆರ್‌ಡಿಬಿ ಯೋಜನೆ ಅಡಿಯಲ್ಲಿ ₹ 60 ಲಕ್ಷ ಅನುದಾನವನ್ನು ಮಂಜೂರು ಮಾಡಲಾಗಿದೆ. 4 ಕೋಣೆಗಳ ಕಟ್ಟಡ ಕಾಮಗಾರಿಯೂ ಶೀಘ್ರದಲ್ಲೇ ಪ್ರಾರಂಭವಾಗಲಿದ್ದು, ಶಾಲೆ ಕಾಮಗಾರಿ ಕಟ್ಟಡ ನಿರ್ಮಾಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿದ್ದನಗೌಡ ಪೊಲೀಸ್ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರಿಗೌಡ ಹುಲಕಲ್, ಕೆಂಭಾವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ್ ಚಿಂಚೋಳಿ, ಶಿವಮಾಂತ ಚಂದಾಪುರ, ಬಸನಗೌಡ ಹೊಸಮನಿ, ಶಶಿಧರ ಮಾಲಿಪಾಟೀಲ್, ರಹೀಮಾನ್ ಪಟೇಲ್ ಯಲಗೋಡ, ಮಲ್ಲಣ್ಣ ಹೆಗ್ಗೇರಿ, ಖಾಜಾಪಟೇಲ್ ಕಾಚೂರ, ಅಯ್ಯಪ್ಪಗೌಡ ವಂದಗನೂರ, ಸೋಫಿಸಾಬ ನಾಶಿ, ಆನಂದ್ ವಜ್ಜಲ್, ರಾಮನಗೌಡ ಹೊಸಮನಿ, ಮಲ್ಲಿಕಾರ್ಜುನ ಸಜ್ಜನ್, ಶಿವು ಚವ್ಹಾಣ ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಸಹ ಶಿಕ್ಷಕರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.