ಯಾದಗಿರಿ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಶನಿವಾರ ಯಾದಗಿರಿ ಜಿಲ್ಲೆಗೆ ಭೇಟಿ ನೀಡಿದ್ದು, ಜಿಲ್ಲೆಯ ವಿವಿಧಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ ನಡೆಸುತ್ತಿದ್ದಾರೆ.
ಯಾದಗಿರಿ ತಾಲ್ಲೂಕಿನ ಏಕಲವ್ಯ ಮಾದರಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಪರಿಶೀಲಿಸಿದರು. ನಂತರ ಬಂದಳ್ಳಿ ಗ್ರಾಮಕ್ಕೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶೌಚಾಲಯ ಬಳಕೆ ಬಗ್ಗೆ ಮಾಹಿತಿ ಕೇಳಿದರು. ಆ ಸಮಯದಲ್ಲಿಮಹಿಳೆಯೊಬ್ಬಳು ‘ನಾವು ಹಳ್ಳದ ಕಡೆ ಬಹಿರ್ದೆಸೆಗೆ ಹೋಗುತ್ತೇವೆಂದರು.’ಆ ವಿಚಾರಕ್ಕೆ ಪ್ರತಿಕ್ರಿಯಿಸಿದವಿಜಯ್ ಭಾಸ್ಕರ್, ‘ಕಟ್ಟಿಸಿರುವ ಶೌಚಾಲಯಬಳಕೆ ಮಾಡದಿದ್ದರೆ ಪಡಿತರ ಹಾಗೂ ವಿದ್ಯುತ್ ಕಟ್ ಮಾಡಲಾಗುತ್ತದೆ. ಶೌಚಾಲಯ ಬಳಕೆ ಮಾಡದಿದ್ದರೆ ಸರ್ಕಾರ ಹಣ ವಾಪಸ್ ಪಡೆಯುತ್ತದೆ’ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.