ADVERTISEMENT

ಕೆಂಭಾವಿ: ಇಂದಿರಾ ಕ್ಯಾಂಟಿನ್ ಕಾಮಗಾರಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 22 ಮೇ 2025, 13:45 IST
Last Updated 22 ಮೇ 2025, 13:45 IST
ಕೆಂಭಾವಿ ಬಸ್ ನಿಲ್ದಾಣಕ್ಕೆ ಗುರುವಾರ ಜಿಲ್ಲಾಧಿಕಾರಿ ಬಿ.ಸುಶೀಲಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪುರಸಭೆ ಅಧ್ಯಕ್ಷ ರೆಹಮಾನ್‌ ಪಟೇಲ ಯಲಗೋಡ, ಯೋಜನಾ ನಿರ್ದೇಶಕ ಲಕ್ಷ್ಮೀಕಾಂತ, ಮುಖ್ಯಾಧಿಕಾರಿ ಮಹ್ಮದ್ ಯೂಸಫ್ ಹಾಜರಿದ್ದರು 
ಕೆಂಭಾವಿ ಬಸ್ ನಿಲ್ದಾಣಕ್ಕೆ ಗುರುವಾರ ಜಿಲ್ಲಾಧಿಕಾರಿ ಬಿ.ಸುಶೀಲಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪುರಸಭೆ ಅಧ್ಯಕ್ಷ ರೆಹಮಾನ್‌ ಪಟೇಲ ಯಲಗೋಡ, ಯೋಜನಾ ನಿರ್ದೇಶಕ ಲಕ್ಷ್ಮೀಕಾಂತ, ಮುಖ್ಯಾಧಿಕಾರಿ ಮಹ್ಮದ್ ಯೂಸಫ್ ಹಾಜರಿದ್ದರು    

ಕೆಂಭಾವಿ: ‘ಶೀಘ್ರದಲ್ಲೆ ಇಂದಿರಾ ಕ್ಯಾಂಟೀನ್ ಆರಂಭಕ್ಕೆ ದಿನಾಂಕ ನಿಗದಿ ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ ಹೇಳಿದರು.

ಗುರುವಾರ ಪಟ್ಟಣದ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಸ್ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ ಶೀಘ್ರ ಮುಗಿಸುವಂತೆ ಸೂಚನೆ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ಉದ್ಘಾಟನೆಗೆ ದಿನಾಂಕ ನಿಗದಿಪಡಿಸಲಾಗುವುದು’ ಎಂದು ಹೇಳಿದರು.

ಬಸ್ ನಿಲ್ದಾಣದಲ್ಲಿ ಮೂಲಸೌಲಭ್ಯಗಳ ಕುರಿತು ಹಲವಾರು ದೂರುಗಳು ಬಂದಿದ್ದು, ಶೀಘ್ರದಲ್ಲೆ ಸೌಲಭ್ಯ ಒದಗಿಸಲು ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಕುಡಿಯುವ ನೀರು, ಶೌಚಾಲಯಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ ಅವರು, ಪುರಸಭೆಗೆ ಬರುವ ಸಾರ್ವಜನಿಕರ ಜೊತೆ ಸಂಯಮದಿಂದ ವರ್ತಿಸಿ ಅವರ ಸಮಸ್ಯೆಗಳನ್ನು ಬಗೆಹರಿಸುವಂತೆ ಸ್ಥಳದಲ್ಲಿದ್ದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು.

ADVERTISEMENT

‘ಸಾಮಾಜಿಕ ಜಾತಿಗಣತಿ ಸರಿಯಾದ ಕ್ರಮದಲ್ಲಿ ನಡೆಯುತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿನ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲು ಶೀಘ್ರದಲ್ಲೆ ಕುಂದು ಕೊರತೆ ಸಭೆ ಕರೆಯುವಂತೆ ಸೂಚನೆ ನೀಡಲಾಗಿದೆ’ ಎಂದು ಡಾ.ಸುಶೀಲ ಬಿ ಹೇಳಿದರು.

ಪುರಸಭೆ ಅಧ್ಯಕ್ಷ ರೆಹಮಾನ್‌ ಪಟೇಲ ಯಲಗೋಡ, ಯೋಜನಾ ನಿರ್ದೇಶಕ ಲಕ್ಷ್ಮೀಕಾಂತ, ಮುಖ್ಯಾಧಿಕಾರಿ ಮಹ್ಮದ್ ಯುಸೂಫ್ ಹಾಜರಿದ್ದರು.

ಪುರಸಭೆಗೆ ಭೇಟಿ ನೀಡದ್ದಕ್ಕೆ ಬೇಸರ

ಪಟ್ಟಣಕ್ಕೆ ಗುರುವಾರ ಆಗಮಿಸಿದ್ದ ಜಿಲ್ಲಾಧಿಕಾರಿ ಪುರಸಭೆಗೆ ಬಾರದೆ ಕೇವಲ ಇಂದಿರಾ ಕ್ಯಾಂಟೀನ್ ಕಾಮಗಾರಿ ವೀಕ್ಷಣೆ ಮಾಡಿ ತೆರಳಿದ್ದರಿಂದ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಯಿತು. ಪುರಸಭೆ ಆಗಿ ಹಲವು ವರ್ಷ ಗತಿಸಿದರೂ  ಇಲ್ಲಿಯವರೆಗೂ ಜಿಲ್ಲಾಧಿಕಾರಿಗಳು ಪುರಸಭೆಗೆ ಆಗಮಿಸಿ ಇಲ್ಲಿರುವ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸದೇ ಇರುವುದಕ್ಕೆ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ. ಈಗಾಗಲೇ ಪಟ್ಟಣದಲ್ಲಿರುವ ಸಮಸ್ಯೆಗಳ ಸರಮಾಲೆ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ದೂರುಗಳಿದ್ದರೂ ಇಲ್ಲೇ ಆಗಮಿಸಿದ ಜಿಲ್ಲಾಧಿಕಾರಿಗೆ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಆಲಿಸುವಸ್ಟು ಪುರುಸೊತ್ತಿಲ್ಲವೇ ಎಂಬ ಪ್ರಶ್ನೆ ಹಲವರಿಂದ ಕೇಳಿಬಂತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.