ADVERTISEMENT

ಅಭ್ಯರ್ಥಿಗಳ ಸಂದರ್ಶನ; ಜಿಲ್ಲಾಧಿಕಾರಿ ಭೇಟಿ

​ಪ್ರಜಾವಾಣಿ ವಾರ್ತೆ
Published 23 ಜುಲೈ 2019, 20:29 IST
Last Updated 23 ಜುಲೈ 2019, 20:29 IST
ಯಾದಗಿರಿ ನಗರದ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಕೇಂದ್ರದಲ್ಲಿ ನಡೆಯುತ್ತಿರುವ ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನ ಸ್ಥಳಕ್ಕೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಭೇಟಿ ನೀಡಿದರು
ಯಾದಗಿರಿ ನಗರದ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಕೇಂದ್ರದಲ್ಲಿ ನಡೆಯುತ್ತಿರುವ ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನ ಸ್ಥಳಕ್ಕೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಭೇಟಿ ನೀಡಿದರು   

ಯಾದಗಿರಿ: ನಗರದ ಗಂಜ್ ಪ್ರದೇಶದ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಕೇಂದ್ರದಲ್ಲಿ ನಡೆಯುತ್ತಿರುವ ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆ (ಪಿಎಂಇಜಿಪಿ) ಅಡಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ‘ನಿಯಮಾನುಸಾರ ದಾಖಲೆಗಳನ್ನು ಪರಿಶೀಲಿಸಿದ ನಂತರ ಫಲಾನುಭವಿಗಳ ಆಯ್ಕೆ ಮಾಡಬೇಕು. ಪ್ರತಿ ಅಭ್ಯರ್ಥಿಗೂ ಮೌಲ್ಯಾಂಕಗಳು ನೀಡಿ, ಮುಂದಿನ ಐದು ವರ್ಷಗಳವರೆಗೆ ಮಾರುಕಟ್ಟೆಯಲ್ಲಿ ಸ್ಥಿರವಾಗಿ ನಿಲ್ಲುವಂತಹ ಹೊಸ ಯೋಜನೆ (ಘಟಕ)ಗಳನ್ನು ಆಯ್ಕೆ ಮಾಡುವಂತೆ’ ಸೂಚಿಸಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೆಶಕ ಮಾಣಿಕ್ ವಿ.ರಘೋಜಿ, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ ಗೋಪಾಲರಾವ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಆರ್.ಗೋಪಾಲ, ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧಿಕಾರಿ ಎಫ್.ಎಸ್.ಹೊಂಗಲ್, ಎಂಎಸ್‍ಎಂಇ ಅಧಿಕಾರಿ ನಾಗೇಶ, ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕಿ ರೇಖಾ ಎನ್.ಮ್ಯಾಗೇರಿ, ಎಂ.ಎ.ಸಲೀಂ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.