ADVERTISEMENT

ಸುರಪುರ: ದೇವಾಪುರ ವಸತಿ ನಿಲಯಕ್ಕೆ ನ್ಯಾಯಾಧೀಶರ ಭೇಟಿ 

​ಪ್ರಜಾವಾಣಿ ವಾರ್ತೆ
Published 20 ಜುಲೈ 2025, 7:08 IST
Last Updated 20 ಜುಲೈ 2025, 7:08 IST
ಸುರಪುರ ತಾಲ್ಲೂಕಿನ ದೇವಾಪುರ ಗ್ರಾಮದ ವಸತಿ ನಿಲಯಕ್ಕೆ ಪ್ರಧಾನ ಸಿವಿಲ್ ನ್ಯಾಯಾಧೀಶ ಬಸವರಾಜ ಭೇಟಿ ನೀಡಿ ಪರಿಶೀಲಿಸಿದರು
ಸುರಪುರ ತಾಲ್ಲೂಕಿನ ದೇವಾಪುರ ಗ್ರಾಮದ ವಸತಿ ನಿಲಯಕ್ಕೆ ಪ್ರಧಾನ ಸಿವಿಲ್ ನ್ಯಾಯಾಧೀಶ ಬಸವರಾಜ ಭೇಟಿ ನೀಡಿ ಪರಿಶೀಲಿಸಿದರು   

ಸುರಪುರ: ತಾಲ್ಲೂಕಿನ ದೇವಾಪುರ ಗ್ರಾಮದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಶನಿವಾರ ಜೆಎಂಎಫ್‍ಸಿ ಕೋರ್ಟ್‍ನ ಪ್ರಧಾನ ಸಿವಿಲ್ ನ್ಯಾಯಾಧೀಶ ಬಸವರಾಜ ಭೇಟಿ ನೀಡಿದರು. ಕಳೆದ ವಾರ ವಿದ್ಯಾರ್ಥಿನಿಯರು ಅಸ್ವಸ್ಥರಾದ ಪ್ರಕರಣದ ಬಗ್ಗೆ ವಿಚಾರಿಸಿದರು.

ವಸತಿ ನಿಲಯದಲ್ಲಿ ಕೊಡುವ ಊಟದ ಬಗ್ಗೆ ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದರು. ಅಡುಗೆ ಕೋಣೆ, ಅಡುಗೆ ಸಾಮಗ್ರಿಗಳ ಸ್ವಚ್ಛತೆ ನೋಡಿದರು. ವಸತಿ ನಿಲಯ ಆವರಣದ ಪರಿಸರ ವೀಕ್ಷಿಸಿದರು.

‘ವಿದ್ಯಾರ್ಥಿನಿಯರಿಗೆ ಪ್ರತಿದಿನ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು’ ಎಂದು ಸೂಚಿಸಿದರು.

ADVERTISEMENT

ಬಿಸಿಎಂ ಅಧಿಕಾರಿ ತಿಪ್ಪಾರೆಡ್ಡಿ ಪಾಟೀಲ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.