ADVERTISEMENT

ಸುರಪುರ | ಹೋರಾಟದಲ್ಲಿ ಸುರಪುರ ಅರಸರ ಪಾತ್ರ ಕೂಡ ಅಮೋಘ: ಶಾಸಕ

ಸುರಪುರ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2024, 16:02 IST
Last Updated 17 ಸೆಪ್ಟೆಂಬರ್ 2024, 16:02 IST
ಸುರಪುರದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಶಾಸಕ ರಾಜಾ ವೇಣುಗೋಪಾಲ ನಾಯಕ ಮಾತನಾಡಿದರು 
ಸುರಪುರದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಶಾಸಕ ರಾಜಾ ವೇಣುಗೋಪಾಲ ನಾಯಕ ಮಾತನಾಡಿದರು    

ಸುರಪುರ: ‘ಅನೇಕ ಮಹನೀಯರ ಹೋರಾಟದ ಫಲವಾಗಿ ಹೈದರಾಬಾದ್ ನಿಜಾಮರ ಆಳ್ವಿಕೆಯ ಭಾಗವಾದ ಆರು ಜಿಲ್ಲೆಗಳು ಸ್ವಾತಂತ್ರ್ಯ ಪಡೆಯಲು ಒಂದು ವರ್ಷ ಹೆಚ್ಚು ಕಾಯಬೇಕಾಯಿತು’ ಎಂದು ಶಾಸಕ ರಾಜಾ ವೇಣುಗೋಪಾಲನಾಯಕ ಹೇಳಿದರು.

ಇಲ್ಲಿಯ ಸರ್ದಾರ್ ವಲ್ಲಭಭಾಯ್‌ ಪಟೇಲ್ ವೃತ್ತದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಸರ್ದಾರ್ ವಲ್ಲಭಭಾಯಿ ಪಟೇಲರು ದಿಟ್ಟತನದಿಂದ ಕೈಗೊಂಡ ಸೇನಾ ಕಾರ್ಯಾಚರಣೆಯಲ್ಲಿ, ನಿಜಾಮ ಶರಣಾಗಿ ಭಾರತದ ಒಕ್ಕೂಟಕ್ಕೆ ಸೇರಿದ್ದರಿಂದ ಹೈದರಾಬಾದ್ ಕರ್ನಾಟಕ 1948 ಸೆ. 17 ರಂದು ವಿಮೋಚನೆಯಾಯಿತು’ ಎಂದರು.

ADVERTISEMENT

‘ದೇಶದ ಸಮಗ್ರತೆಯ ದೃಷ್ಟಿಯಿಂದ ಸರ್ದಾರ್ ವಲ್ಲಭಭಾಯಿ ಪಟೇಲರು ಹೈದರಾಬಾದ್ ಸಂಸ್ಥಾನದ ನಿಜಾಮನನ್ನು ಮಣಿಸಿ ಈ ಭಾಗಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಟ್ಟಿದ್ದಾರೆ. ನಾವೆಲ್ಲರೂ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ವಿಮೋಚನಾ ಹೋರಾಟದಲ್ಲಿ ಸುರಪುರ ಸಂಸ್ಥಾನದ ಅರಸರ ಪಾತ್ರ ಕೂಡ ಅಮೋಘವಾಗಿದೆ. ಈ ಭಾಗದ ಅನೇಕರು ಈ ಹೋರಾಟದಲ್ಲಿ ಭಾಗಿಯಾಗಿದ್ದರು’ ಎಂದರು.

ತಹಶೀಲ್ದಾರ್ ಎಚ್.ಎ.ಸರಕಾವಸ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಿವೃತ್ತ ಪ್ರಾಚಾರ್ಯ ವೇಣುಗೋಪಾಲ ನಾಯಕ ಜೇವರ್ಗಿ ಉಪನ್ಯಾಸ ನೀಡಿದರು.

ನಗರಸಭೆ ಅಧ್ಯಕ್ಷೆ ಹೀನಾ ಕೌಸರ್, ಉಪಾಧ್ಯಕ್ಷ ರಾಜಾ ಪಿಡ್ಡನಾಯಕ (ತಾತಾ), ತಾಲ್ಲೂಕು ಪಂಚಾಯಿತಿ ಇ.ಓ. ಬಸವರಾಜ ಸಜ್ಜನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ್ ಗುತ್ತೇದಾರ್, ಟಿಎಚ್‍ಒ ಡಾ. ಆರ್.ವಿ.ನಾಯಕ, ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ವೇದಿಕೆಯಲ್ಲಿದ್ದರು.

ಯೂತ್‌ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ರಾಜಾ ಕುಮಾರನಾಯಕ, ಯುವ ಮುಖಂಡ ರಾಜಾ ಸಂತೋಷನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಸಿಬ್ಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ಹಣಮಂತ್ರಾಯ ಚೌಡೇಶ್ವರಹಾಳ ಸ್ವಾಗತಿಸಿದರು. ಮಹಾದೇವ ಎಚ್.ಜಿ. ನಿರೂಪಿಸಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.