ADVERTISEMENT

ಕಲ್ಯಾಣ ಕರ್ನಾಟಕ ಉತ್ಸವ: ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಶಿಕ್ಷಣ ಸಚಿವ ನಾಗೇಶ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 4:22 IST
Last Updated 17 ಸೆಪ್ಟೆಂಬರ್ 2021, 4:22 IST
ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಮಾತನಾಡಿದರು
ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಮಾತನಾಡಿದರು   

ಯಾದಗಿರಿ: ನಗರದ ಸರ್ಕಾರಿ ಜೂ‌ನಿಯರ್ ಕಾಲೇಜು ಮೈದಾನದ ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಹೈದರಾಬಾದ್ ನಿಜಾಮರ ಕಪಿಮುಷ್ಠಿಯಿಂದ ವಿಮೋಚನಾ ಗೊಂಡ ದಿನ ಇದು. ಬ್ರಿಟಿಷರು ಸ್ವಾತಂತ್ರ್ಯ ನೀಡುವ ಸಂದರ್ಭದಲ್ಲಿ ವಿವಿಧ ರಾಜ ಮನೆತನಗಳ 562 ಸಂಸ್ಥಾನಗಳು ದೇಶದಲ್ಲಿದ್ದವು. ಹೈದರಾಬಾದ್ ನಿಜಾಮರು ಮಾತ್ರ ಸ್ಚತಂತ್ರವಾಗಿರಲು ಬಯಸಿ ರಾಜ ಪ್ರಭುತ್ವದ ಆಡಳಿತವನ್ನು ಮುಂದುವರಿಸಲು ನಿರ್ಧರಿಸಿದರು ಎಂದರು.

ಸಹಸ್ರ ಹೋರಾಟಗಾರರ ತ್ಯಾಗ, ಬಲಿದಾನಗಳಿಂದ ಹೈದರಾಬಾದ್ ಕರ್ನಾಟಕ (ಕಲ್ಯಾಣ ಕರ್ನಾಟಕ) ವಿಮೋಚನಾ ಹೋರಾಟ ಈ ನಾಡಿನ ಭವ್ಯ ಇತಿಹಾಸವಾಗಿ ಉಳಿದಿದೆ ಎಂದರು.

ADVERTISEMENT

ಪೊಲೀಸ್, ಅಬಕಾರಿ, ಅರಣ್ಯ ಇಲಾಖೆ, ಅಗ್ನಿಶಾಮಕ, ಡಿಎಆರ್ ತಂಡಗಳಿಂದ ಪಥಸಂಚಲನ ನಡೆಯಿತು.

ಈ ವೇಳೆ ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕರಾದ ವೆಂಕಟರೆಡ್ಡಿ ಮುದ್ನಾಳ, ರಾಜೂಗೌಡ, ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ, ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಯೂಡಾ ಅಧ್ಯಕ್ಷ ಬಸವರಾಜ ಚಂಡ್ರಕಿ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ, ಪೌರಾಯುಕ್ತ ಭೀಮಣ್ಣ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.