ಯಾದಗಿರಿ: ನಗರವೂ ಸೇರಿದಂತೆ ಜಿಲ್ಲೆಯ ಹಲವೆಡೆ ಬುಧವಾರ ಕಲ್ಯಾಣ ಕರ್ನಾಟಕ ಉತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಸಂಘ–ಸಂಸ್ಥೆಗಳು, ಸರ್ಕಾರಿ ಕಚೇರಿಗಳು, ಶಾಲಾ–ಕಾಲೇಜುಗಳ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಮಹಾತ್ಮ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಲಾಯಿತು.
ನಗರದ ಡಿ.ದೇವರಾಜ ಅರಸ್ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ (ಕನ್ನಡ ಮಾಧ್ಯಮ) ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಮಾಡಲಾಯಿತು. ವಸತಿ ನಿಲಯದ ಮೇಲ್ವಿಚಾರಕ ನಿಂಗಣ್ಣ ಹೊಸಮನಿ, ಮುಖ್ಯಶಿಕ್ಷಕ ವೆಂಕಟೇಶ ಪೂಜಾರಿ, ಕವಿತಾ ಪಾಟೀಲ, ಅಯ್ಯಣ್ಣ ಕೆ, ಪ್ರಭು ಮೈಲಾರಿ, ಹುಚ್ಚಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ನಗರದ ಕರ್ನಾಟಕ ರಕ್ಷಣಾ ವೇದಿಕೆ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಅವರು ಉತ್ಸವದ ಅಂಗವಾಗಿ ಧ್ವಜಾರೋಹಣ ಮಾಡಿದರು.
ವೇದಿಕೆಯ ಮುಖಂಡರಾದ ಸಂತೋಷಕುಮಾರ ನಿರ್ಮಲಕರ್, ಹಣಮಂತ ಅಚ್ಚೋಲಾ, ಭೀಮರಾಯ ರಾಮಸಮುದ್ರ, ನಾಗು ತಾಂಡೂರಕರ್, ಸುರೇಶ ಬೆಳಗುಂದಿ, ಜರ್ನಾಧನ ಬಡಿಗೇರಾ, ಸಾಗರ ಹುಲ್ಲೇರ, ಬಸವರಾಜ ಜಗನಾಥ, ಅಶೋಕ ಮುಂಡರಗಿ, ರಮೇಶ.ಡಿ.ನಾಯಕ ಭಾಗಿಯಾಗಿದ್ದರು.
ನಗರದ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಧ್ವಜಾರೋಹಣ ಮಾಡಲಾಯಿತು.
ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ ನಾಯಕ, ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಮೊಗದಂಪುರ, ಪ್ರಮುಖರಾದ ರಂಗನಾಥ ನಾಯಕ, ಈಶಪ್ಪ ಕಪನೂರ, ಬಸವರಾಜ ಕುಂಬಾರ, ನರೇಶ ಕೆ. ಹೊಸಳ್ಳಿ, ಮಹಮದ್ ಅಮೀರ್, ಮರಗೇಶ ಉಪಸ್ಥಿತರಿದ್ದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ಕಲ್ಯಾಣ ಕರ್ನಾಟಕ ದಿನಾಚರಣೆ ಅಂಗವಾಗಿ ಜಿಲ್ಲಾ ಅಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಅವರು ಧ್ವಜಾರೋಹಣ ನೆರವೇರಿಸಿದರು.
ಇದೇ ವೇಳೆ ವಿಶ್ವಕರ್ಮ, ಮಹಾತ್ಮ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಲಾಯಿತು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.