ADVERTISEMENT

ಡಿ.3 ರಂದು ಕನಕದಾಸ ಜಯಂತಿ ಸರಳ ಆಚರಣೆ

ಕನಕದಾಸ ಜಯಂತಿ ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2020, 16:15 IST
Last Updated 29 ನವೆಂಬರ್ 2020, 16:15 IST
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನಕದಾಸರ ಜಯಂತಿಯ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಮಾತನಾಡಿದರು
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನಕದಾಸರ ಜಯಂತಿಯ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಮಾತನಾಡಿದರು   

ಯಾದಗಿರಿ: ಜಿಲ್ಲಾಡಳಿತದ ವತಿಯಿಂದ ಸಂತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಡಿಸೆಂಬರ್ 3ರಂದು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.ತಿಳಿಸಿದರು.

ಕನಕದಾಸರ ಜಯಂತಿಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಸಮಾಜದ ಮುಖಂಡರು, ಗಣ್ಯರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ತಿಳಿಸಿದರು.

ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಕನಕದಾಸರ ಜಯಂತಿಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಡಿಸೆಂಬರ್ 3ರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪಾರ್ಚನೆ ನೆರವೇರಿಸಲಾಗುವುದು. ಅದರಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನಕದಾಸರ ಜಯಂತಿಯನ್ನು ಸರಳವಾಗಿ ಆಚರಿಸುವಂತೆ ನಿರ್ದೇಶನ ನೀಡಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ಉಪ ವಿಭಾಗಾಧಿಕಾರಿ ಶಂಕರ ಸೋಮನಾಳ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಹಳ್ಳಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ವಿಶ್ವನಾಥ ನೀಲಹಳ್ಳಿ, ತಾಲ್ಲೂಕು ಅಧ್ಯಕ್ಷ ಹೊನ್ನಪ್ಪ ಮುಷ್ಟೂರು ಸೇರಿದಂತೆ ಸಮಾಜದ ಗಣ್ಯರು, ವಿವಿಧ ಸಂಘ–ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.