ಕೆಂಭಾವಿ: ಪಟ್ಟಣ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಗುರುವಾರ ರೈತರು ಎತ್ತುಗಳಿಂದ ಕರಿ ಹರಿಯುವ ಮೂಲಕ ಕಾರಹುಣ್ಣಿಮೆಯನ್ನು ಸಂಭ್ರಮದಿಂದ ಆಚರಿಸಿದರು.
ಗ್ರಾಮೀಣ ಸೊಗಡಿನ ಕಾರ ಹುಣ್ಣಿಮೆಯನ್ನು ಮುಂಗಾರು ಹಂಗಾಮಿನ ಮೊದಲ ಹಬ್ಬವೆಂದು ರೈತರು ಆಚರಿಸುತ್ತಾರೆ. ಈಗಾಗಲೇ ಹೊಲಗಳಲ್ಲಿ ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ. ಈ ಮಧ್ಯೆ ಕಾರ ಹುಣ್ಣಿಮೆ ಆಚರಣೆಗೆ ಎಲ್ಲ ರೈತರು ವರ್ಷವಿಡೀ ತನ್ನ ಹೆಗಲಿಗೆ ಹೆಗಲಾಗಿ ದುಡಿಯುವ ದನಕರುಗಳಿಗೆ ಸಿಂಗರಿಸಿ, ಪೂಜೆ ಸಲ್ಲಿಸುವ ಮೂಲಕ ಸಂಭ್ರಮಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.