ತಿಮ್ಮಣ್ಣ ನಾಯಕ ಯಾದಗಿರಿ
ವಡಗೇರಾ: ‘ಹಿರಿಯ, ಅನುಭವಿ ನಾಯಕರಾದ ಯಾದಗಿರಿ ಶಾಸಕ ಚೆನ್ನಾರೆಡ್ಡಿಗೌಡ ಪಾಟೀಲ ತುನ್ನೂರು ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಕಾಂಗ್ರೆಸ್ ಯುವ ಮುಖಂಡ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ತಿಮ್ಮಣ್ಣ ನಾಯಕ ಯಾದಗಿರಿ ಒತ್ತಾಯಿಸಿದ್ದಾರೆ.
‘ತುನ್ನೂರು ಅವರು ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಐದು ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಯಾದಗಿರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಜನರ ಪ್ರೀತಿ, ವಿಶ್ವಾಸಗಳಿಸಬೇಕಾದರೆ ತುನ್ನೂರರವರ ಕಾರ್ಯಕ್ಷಮತೆ ಕಾರಣ. ಅವರು ಕ್ಷೇತ್ರದಲ್ಲಿ ಎಲ್ಲರ ಅಚ್ಚುಮೆಚ್ಚಿನ ಶಾಸಕರಾಗಿದ್ದಾರೆ. ಲೋಕಸಭಾ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ’ ಎಂದಿದ್ದಾರೆ.
‘ಯಾದಗಿರಿ ಕ್ಷೇತ್ರ ಹಿಂದುಳಿದಿದೆ. ಅದರ ಅಭಿವೃದ್ಧಿಗಾಗಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.