ಕೆಂಭಾವಿ: ‘ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಪಂಚ ಗ್ಯಾರಂಟಿ ನೀಡುವ ಮೂಲಕ ಬಡವರ, ದೀನ ದಲಿತರ ರಕ್ಷಣೆಗೆ ಕಂಕಣ ಬದ್ಧವಾಗಿ ನಿಂತಿದೆ’ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನದ ತಾಲ್ಲೂಕು ಅಧ್ಯಕ್ಷ ಬೀರಲಿಂಗೇಶ ಬದ್ಯಾಪೂರ ಹೇಳಿದರು.
ಹೆಗ್ಗಣದೊಡ್ಡಿ ಗ್ರಾಮ ಪಂಚಾಯತಿಯಲ್ಲಿ ಶುಕ್ರವಾರ ನಡೆದ ಪಂಚ ಗ್ಯಾರಂಟಿ ಅನುಷ್ಠಾನ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
‘ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಯುವ ಪದವಿಧರರಿಗೆ ಮಾಸಿಕ ಯುವನಿಧಿ ಯೋಜನೆ, ಮಹಿಳೆಯರ ಖಾತೆಗೆ ಮಾಸಿಕ ಹಣ ವರ್ಗಾವಣೆ ಸೇರಿದಂತೆ ಹಲವು ಸೌಲಭ್ಯಗಳನ್ನು ಸರ್ಕಾರ ನೀಡಿದೆ’ ಎಂದರು.
‘ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಬೊಕ್ಕಸಕ್ಕೆ ಯಾವುದೇ ಹೊಡೆತ ಬೀಳದೆ ಹಣಕಾಸು ವ್ಯವಸ್ಥೆಯಲ್ಲಿ ಬದಾಲಾವಣೆ ತರುವ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಜನತೆಯ ಬೆನ್ನೆಲುಬಾಗಿ ಕೆಲಸ ಮಡುತ್ತಿದ್ದಾರೆ’ ಎಂದರು.
ಗ್ಯಾರಂಟಿ ಯೋಜನೆಗಳ ಜಿಲ್ಲಾ ಉಪಾಧ್ಯಕ್ಷ ಹಳ್ಳೆಪ್ಪ ಹವಾಲ್ದಾರ, ಪಿಡಿಒ ರಾಮನಗೌಡ ದದ್ದಲ, ಧರ್ಮಿಬಾಯಿ ರಾಠೋಡ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು. ಚಂದ್ರಶೇಖರ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.