ADVERTISEMENT

600 ಹೆಚ್ಚುವರಿ ಎಂಬಿಬಿಎಸ್‌ ಸೀಟು, 3 ಹೊಸ ಕಾಲೇಜು: ಶರಣಪ್ರಕಾಶ ಪಾಟೀಲ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 20:09 IST
Last Updated 7 ಫೆಬ್ರುವರಿ 2026, 20:09 IST
ಡಾ.ಶರಣಪ್ರಕಾಶ ಪಾಟೀಲ
ಡಾ.ಶರಣಪ್ರಕಾಶ ಪಾಟೀಲ   

ಯಾದಗಿರಿ: ‘ರಾಜ್ಯದಲ್ಲಿ 600 ಎಂಬಿಬಿಎಸ್‌ ಸೀಟು ಹೆಚ್ಚಳ ಹಾಗೂ 3 ಹೊಸ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಾಗಲಕೋಟೆ, ರಾಮನಗರ ಮತ್ತು ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯ ಪ್ರಸ್ತಾವ ಮಾಡಲಾಗಿದೆ’ ಎಂದು ತಿಳಿಸಿದರು.

‘ಆಗಸ್ಟ್‌ ತಿಂಗಳಲ್ಲಿ ಹುಬ್ಬಳ್ಳಿಯಲ್ಲಿ 400 ಹಾಸಿಗೆಗಳ ಸಾಮರ್ಥ್ಯದ ಜಯದೇವ ಆಸ್ಪತ್ರೆ ಉದ್ಘಾಟಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

‘ಐದು ವರ್ಷಗಳಲ್ಲಿ ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಟೆಷಾಲಿಟಿ, ಟ್ರಾಮಾ ಸೆಂಟರ್ ಹಾಗೂ ಕ್ಯಾನ್ಸರ್ ಆಸ್ಪತ್ರೆಗಳು ಸ್ಥಾಪಿಸುವ ಗುರಿಯೂ ಇದೆ’ ಎಂದು ಸಚಿವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.