ADVERTISEMENT

ಯಾದಗಿರಿ: ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗೆ ಅಲ್ಪ ಮತದಲ್ಲಿ ಸೋಲು

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2021, 4:12 IST
Last Updated 15 ಡಿಸೆಂಬರ್ 2021, 4:12 IST
ಚನ್ನಾರೆಡ್ಡಿ ತುನ್ನೂರು
ಚನ್ನಾರೆಡ್ಡಿ ತುನ್ನೂರು   

ಯಾದಗಿರಿ: ವಿಧಾನ ಪರಿಷತ್‌ (ಸ್ಥಳೀಯ ಸಂಸ್ಥೆ) ಚುನಾವಣೆಯಲ್ಲಿ ಅಲ್ಪಮತದಿಂದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಸೋಲನ್ನಪ್ಪಿದ್ದು, ಬಿಜೆಪಿ ಆಡಳಿತವಿದ್ದರೂ ಮತದಾರರು ನಮಗೆ ಬೆಂಬಲ ನೀಡಿದ್ದಾರೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಚನ್ನಾರೆಡ್ಡಿ ಪಾಟೀಲ ತುನ್ನೂರು ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷದ ಒಬ್ಬರೇ ಶಾಸಕರಿದ್ದರೂ ಕೆಲವೇ ಮತಗಳ ಅಂತರದಿಂದ ಸೋತಿದ್ದೇವೆ. ಬಿಜೆಪಿಯವರು ಹಣಬಲದಿಂದ ಗೆದ್ದಿದ್ದಾರೆ. ಕಳೆದ ಆರು ವರ್ಷದಲ್ಲಿ ಬಿ.ಜಿ.ಪಾಟೀಲ, ಮತ ಹಾಕಿದವ ರನ್ನು ಭೇಟಿಯಾಗದೆ ಇದ್ದರು. ನಮ್ಮ ಅಭ್ಯರ್ಥಿ ಶಿವಾ ನಂದ ಪಾಟೀಲ ಮ ರತೂರ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿಯಲ್ಲಿ ಗೆದ್ದು ಸದಸ್ಯರ ಬಗ್ಗೆ ಅನುಭವ ಹೊಂದಿದ್ದರು. ಆದರೆ, ಮತದಾರರು ನಮ್ಮ ಅಭ್ಯರ್ಥಿಗೆ ಕೈ ಹಿಡಿದಿಲ್ಲ ಎಂದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಆಡಳಿತವಿದ್ದರೂ ಕಾಂಗ್ರೆಸ್‌ ಪಕ್ಷಕ್ಕೆ ಬೇರೆ ಕಡೆ ಜಯ ಸಿಕ್ಕಿದೆ. ಇದು ಮತ್ತಷ್ಟು ಹುರುಪು ತಂದಿದೆ. ಮುಂದಿನ ದಿನಗಳಲ್ಲಿ ಉತ್ಸಾಹದಿಂದ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT