ADVERTISEMENT

SSLC Result 2025 | ವರುಣ ಆನಂದ ದರಬಾರಿ ರಾಜ್ಯಕ್ಕೆ 4ನೇ ಸ್ಥಾನ 

​ಪ್ರಜಾವಾಣಿ ವಾರ್ತೆ
Published 2 ಮೇ 2025, 15:43 IST
Last Updated 2 ಮೇ 2025, 15:43 IST
ವರುಣ ಆನಂದ ದರಬಾರಿ
ವರುಣ ಆನಂದ ದರಬಾರಿ   

ಸುರಪುರ: ‘ತಾಲ್ಲೂಕಿಗೆ ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಫಲಿತಾಂಶ ಪ್ರಕಟವಾಗಿದ್ದು, ಶೇ 46.07ರಷ್ಟು ಫಲಿತಾಂಶ ಬಂದಿದೆ. 4,961 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಆ ಪೈಕಿ 2,286 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ’ ಎಂದು ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಸತೀಶ್ ತಿಳಿಸಿದ್ದಾರೆ.

ತಾಲ್ಲೂಕಿನ ಕವಡಿಮಟ್ಟಿಯ ಅಕ್ಷರ ಪಬ್ಲಿಕ್ ಸ್ಕೂಲ್‍ನ ವಿದ್ಯಾರ್ಥಿ ವರುಣ ಆನಂದ ದರಬಾರಿ 622 ಅಂಕ (ಶೇ 99.52) ಪಡೆದು ಅತ್ಯುತ್ತಮ ಸಾಧನೆ ಮಾಡಿ ರಾಜ್ಯಕ್ಕೆ 4ನೇ ಸ್ಥಾನ ಮತ್ತು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.

ಐದು ವಿಷಯಗಳಲ್ಲಿ ನೂರಕ್ಕೆ ನೂರು: ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿರುವ ವರುಣ ಆನಂದ ದರಬಾರಿ ಐದು ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದುಕೊಂಡಿದ್ದಾನೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.