ಕೆಂಭಾವಿ (ಯಾದಗಿರಿ ಜಿಲ್ಲೆ): ಪುರಸಭೆ ಅಧ್ಯಕ್ಷೆಯಾಗಿ ವಾರ್ಡ್ ನಂ.1 ರ ಮಾಸಮ್ಮ ಹಲಗಿ, ಉಪಾಧ್ಯಕ್ಷರಾಗಿ ವಾರ್ಡ್ ನಂ. 8 ಸೋಪಿಶರಮತ್ ನಾಸಿ ಶುಕ್ರವಾರ ಅವಿರೋಧ ಆಯ್ಕೆಯಾದರು.
ತಹಶೀಲ್ದಾರ್ ನಿಂಗಣ್ಣ ಬಿರಾದಾರ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಇಬ್ಬರೂ ಕಾಂಗ್ರೆಸ್ ಸದಸ್ಯರು.
ಕೆಂಭಾವಿ ಪುರಸಭೆ 23 ವಾರ್ಡ್ ಗಳನ್ನು ಹೊಂದಿದೆ. ಕಾಂಗ್ರೆಸ್ 15, ಬಿಜೆಪಿ 8 ಸದಸ್ಯರಿದ್ದಾರೆ.
ಅಧ್ಯಕ್ಷ ಸ್ಥಾನ ಎಸ್ ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ ಟಿಗೆ ಮೀಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.