ADVERTISEMENT

ಕೆಂಭಾವಿ ತಾಲ್ಲೂಕು; ಮುಖ್ಯಮಂತ್ರಿಗೆ ಮನವಿ

Chief Minister

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2022, 4:31 IST
Last Updated 16 ನವೆಂಬರ್ 2022, 4:31 IST
ಕೆಂಭಾವಿ ಪಟ್ಟಣವನ್ನು ತಾಲ್ಲೂಕು ಕೇಂದ್ರವೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಮಂಗಳವಾರ ಬೆಂಗಳೂರಿನಲ್ಲಿ ಮಾಜಿ ಶಾಸಕ ಗುರು ಪಾಟೀಲ ಶಿರವಾಳ ನೇತೃತ್ವದಲ್ಲಿ ತಾಲ್ಲೂಕು ಹೋರಾಟ ಸಮಿತಿಯ ಪದಾಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು
ಕೆಂಭಾವಿ ಪಟ್ಟಣವನ್ನು ತಾಲ್ಲೂಕು ಕೇಂದ್ರವೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಮಂಗಳವಾರ ಬೆಂಗಳೂರಿನಲ್ಲಿ ಮಾಜಿ ಶಾಸಕ ಗುರು ಪಾಟೀಲ ಶಿರವಾಳ ನೇತೃತ್ವದಲ್ಲಿ ತಾಲ್ಲೂಕು ಹೋರಾಟ ಸಮಿತಿಯ ಪದಾಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು   

ಕೆಂಭಾವಿ: ಪಟ್ಟಣವನ್ನು ತಾಲ್ಲೂಕು ಕೇಂದ್ರವೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಮಂಗಳವಾರ ಬೆಂಗಳೂರಿನಲ್ಲಿ ಮಾಜಿ ಶಾಸಕ ಗುರು ಪಾಟೀಲ ಶಿರವಾಳ ನೇತೃತ್ವದಲ್ಲಿ ತಾಲ್ಲೂಕು ಹೋರಾಟ ಸಮಿತಿ ಪದಾಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

‘ಬಹಳ ದಿನಗಳ ಬೇಡಿಕೆಯಾದ ಕೆಂಭಾವಿ ಪಟ್ಟಣವನ್ನು ತಾಲ್ಲೂಕು ಕೇಂದ್ರವೆಂದು ಘೋಷಣೆ ಮಾಡಬೇಕು. ಸರ್ಕಾರ ರಚನೆ ಮಾಡಿದ್ದ ಎಲ್ಲ ಸಮಿತಿಗಳು ತಾಲ್ಲೂಕು ಕೇಂದ್ರಕ್ಕೆ ಈ ಪಟ್ಟಣ ಯೋಗ್ಯವಿದೆ ಎಂದು ವರದಿ ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಜನರಿಗೆ ಅನ್ಯಾಯವಾಗಿದ್ದು ಕೆಂಭಾವಿಯನ್ನು ತಾಲ್ಲೂಕು ಕೇಂದ್ರವೆಂದು ಘೋಷಣೆ’ ಮಾಡುವಂತೆ ಆಗ್ರಹಿಸಿದರು.

ಸಕಾರಾತ್ಮಕ ಸ್ಪಂದನೆ: ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ‘ಕೆಲ ದಿನಗಳ ನಂತರ ರಾಜ್ಯದಲ್ಲಿ ಮತ್ತೆ ಕೆಲವು ಪಟ್ಟಣಗಳನ್ನು ತಾಲ್ಲೂಕು ಕೇಂದ್ರಗಳೆಂದು ನಮ್ಮ ಸರ್ಕಾರ ಘೋಷಣೆ ಮಾಡಲಿದೆ. ಆಗ ಕೆಂಭಾವಿಯನ್ನು ಪರಿಗಣಿಸಲಾಗುವುದು’ ಭರವಸೆ ನೀಡಿದರು ಎಂದು ಹೋರಾಟ ಸಮಿತಿಯ ಪದಾಧಿಕಾರಿಗಳು ದೂರವಾಣಿ ಮೂಲಕ ತಿಳಿಸಿದರು.

ADVERTISEMENT

ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ನಮ್ಮ ಬಿಜೆಪಿ ಸರ್ಕಾರ ಈ ಬಾರಿ ಕೆಂಭಾವಿ ಪಟ್ಟಣವನ್ನು ತಾಲ್ಲೂಕು ಕೇಂದ್ರವೆಂದು ಘೋಷಣೆ ಮಾಡುವುದು ಶತಸಿದ್ಧ. ಈ ಬಗ್ಗೆ ಸಿಎಂ ಸ್ಪಷ್ಟ ಭರವಸೆ ನೀಡಿದ್ದು ಮುಂಬರುವ ದಿನಗಳಲ್ಲಿ ಪಟ್ಟಣವು ತಾಲ್ಲೂಕು ಕೇಂದ್ರವಾಗಲಿದೆ ಎಂದು ಮಾಜಿ ಶಾಸಕ ಗುರುಪಾಟೀಲ ಶಿರವಾಳ ಹೇಳಿದರು.

ನಿಂಗನಗೌಡ ದೇಸಾಯಿ, ಲಿಂಗನಗೌಡ ಮಾಲಿಪಾಟೀಲ, ಬಸವರಾಜಪ್ಪಗೌಡ ಹೊಸಮನಿ, ಶರಣಪ್ಪ ಬಂಡೋಳಿ, ಸಿದ್ಧನಗೌಡ, ಪರಸನಹಳ್ಳಿ, ಲಿಂಗನಗೌಡ, ಮಾನಶಪ್ಪ
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.