ಕೆಂಭಾವಿ: ಪ್ರಸಕ್ತ ಸಾಲಿನ ಅತ್ಯತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಪಟ್ಟಣದ ಪ್ರಭಾರ ಕಂದಾಯ ನಿರೀಕ್ಷಕ ರಾಜೇಸಾಬ್ ಕಂದಗಲ್ ಆಯ್ಕೆಯಾಗಿದ್ದಾರೆ.
ಕಂದಾಯ ಇಲಾಖೆ ವತಿಯಿಂದ ಕೊಡಮಾಡುವ ಪ್ರಶಸ್ತಿಗೆ ರಾಜ್ಯದ 36 ಗ್ರಾಮ ಆಡಳಿತಾಧಿಕಾರಿಗಳು ಆಯ್ಕೆಯಾಗಿದ್ದು ಪಟ್ಟಿಯಲ್ಲಿ ಜಿಲ್ಲೆ ಸ್ಥಾನ ಪಡೆದ ಏಕೈಕ ಅಧಿಕಾರಿ ಕಂದಗಲ್. ಶುಕ್ರವಾರ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆಯುವ ಕಂದಾಯ ಇಲಾಖೆ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.