
ಕೆಂಭಾವಿ: ಇಲ್ಲಿಗೆ ಸಮೀಪ ಏವೂರ ಗ್ರಾಮದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವದರೊಂದಿಗೆ ನೆರವೇರಿಸಲಾಯಿತು. ನಂತರ ಹಾಜರಾದ ಮಕ್ಕಳಿಗೆ ಪುಷ್ಪ ನೀಡಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಮುಖಂಡ ಮಲ್ಲನಗೌಡ ಪಾಟೀಲ, ‘ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಅನೇಕ ಸೌಲಭ್ಯಗಳು ದೊರಕುತ್ತಿವೆ. ನಮ್ಮ ಊರಿನ ಎಲ್ಲ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದಿ ಸೌಲಭ್ಯಗಳ ಸದುಪಯೋಗ ಮಾಡಿಕೊಳ್ಳಬೇಕು’ ಎಂದು ಹೇಳಿದರು.
ಮುಖ್ಯ ಶಿಕ್ಷಕಿ ಬಸಲಿಂಗಮ್ಮ ಮಾತನಾಡಿ, ‘ಸರ್ಕಾರ ವಿದ್ಯಾರ್ಥಿಗಳಿಗೆ ಅನುಕೂಲಗಳನ್ನು ಕಲ್ಪಿಸುವದರ ಜತೆ ಕಳೆದ ವರ್ಷದಿಂದ ಎಲ್‍ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸಿದೆ. ಪಾಲಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.
ಎಸ್‍ಡಿಎಂಸಿ ಅಧ್ಯಕ್ಷ ಶಂಕರಗೌಡ ಕೊಂಕಲ, ಪ್ರಮುಖರಾದ ಪರಶುರಾಮ ಟಣಕೆದಾರ, ದೇವಣ್ಣ ದೊರೆ, ಶಾಂತಯ್ಯ ಗುತ್ತೇದಾರ, ಸತೀಶ ಕಣೆಕಲ್, ಬಾಬುಸಾಬ ಬಾಚಿಮಟ್ಟಿ, ರಮೇಶ ನಾಟಿಕಾರ, ಜಟ್ಟೆಪ್ಪ ಹೊಸಮನಿ, ಶರಣಪ್ಪ ಪೂಜಾರಿ, ನಬಿ ಮಕಾಶಿ, ಲಕ್ಷ್ಮೀಕಾಂತ, ಚಂದ್ರಕಾಂತ, ಶಿಕ್ಷಣ ಸಿಬ್ಬಂದಿಗಳಾದ ಭೀಮರಾಯ, ವಿದ್ಯಾವತಿ, ವಿಜಯಲಕ್ಷ್ಮೀ ಸೇರಿದಂತೆ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.