
ವಡಗೇರಾ: ‘ಸರ್ಕಾರವು ನಿಗದಿ ಪಡಿಸಿದ ಗುರಿಯನ್ನು ಸಕಾದಲ್ಲಿ ತಲುಪಬೇಕು ಯಾವುದೆ ಕಾರಣಕ್ಕೂ ವಿಳಂಬಧೋರಣೆಯನ್ನು ಸಹಿಸುವುದಿಲ್ಲ’ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರ ಸಮಿತಿ ವಡಗೇರಾ ತಾಲ್ಲೂಕು ಅಧ್ಯಕ್ಷ ಖಾಜಾಮೋನುದ್ದಿನ್ ಮಿರ್ಚಿ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
‘ಸರ್ಕಾರ ಬಡವರಿಗಾಗಿ ಹಾಗೂ ದೀನ ದಲಿತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಅವುಗಳು ನಿಜವಾದ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಅಧಿಕಾರಿಗಳದ್ದಾಗಿದೆ. ಒಂದು ವೇಳೆ ಇದರ ಬಗ್ಗೆ ಉದಾಸಿನತೆಯನ್ನು ತೋರಿದರೆ ಅಂತಹ ಅಧಿಕಾರಿಗಳ ಮೇಲೆ ಕ್ರಮಗಳನ್ನು ಕೈಗೊಳ್ಳಲು ಶಿಫಾರಸ್ಸು ಮಾಡಲಾಗವುದು’ ಎಂದರು.
ತಾಪಂ ಇಒ ಮಲ್ಲಿಕಾರ್ಜುನ ಸಂಗ್ವಾರ ಅವರು ಗ್ಯಾರಂಟಿ ಯೋಜನೆಯ ಅನುಷ್ಠಾನದ ಇಲಾಖೆಗಳಾದ ಆಹಾರ, ಯುವನಿಧಿ, ಶಕ್ತಿ, ಗೃಹ ಜ್ಯೋತಿ, ಗೃಹ ಲಕ್ಷ್ಮೀ ಯೊಜನೆಯ ಅಡಿಯಲ್ಲಿ ತಾಲ್ಲೂಕಿನಲ್ಲಿ ಸಾಧಿಸಿದ ಪ್ರಗತಿ, ಗುರಿ ಮತ್ತು ಸಾಧನೆಯನ್ನು ಅಂಕಿ ಅಂಶಗಳ ಸಹಿತಿ ವಿವರಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರ ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.